ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಜ್ಞಾನಪ್ರಕಾಶ್ ನಾಮಪತ್ರ ಸಲ್ಲಿಕೆ ಇಂದು

Rashmi Kasaragodu
Updated On : 26 Mar 2014, 1:07 am

ಮೈಸೂರು: ಮೈಸೂರು ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸುವುದಾಗಿ ಕ್ರೈಸ್ತರ ಪ್ರಗತಿಪರ ಸಂಸ್ಥೆ ಅಧ್ಯಕ್ಷ ಜೆ. ಜ್ಞಾನಪ್ರಕಾಶ್ ತಿಳಿಸಿದರು. ಯಾವ ಪಕ್ಷಗಳೂ ಕ್ರಿಶ್ಚಿಯನ್ನರಿಗೆ ಸೂಕ್ತ ಸ್ಥಾನ ಮಾನ ನೀಡುತ್ತಿಲ್ಲ. ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಯಾವ ಸರ್ಕಾರವೂ ತಲೆ ಕೆಡಿಸಿಕೊಂಡಿಲ್ಲ. ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಲ್ಪಸಂಖ್ಯಾತರಿಗೆ ದೊರಕಬೇಕಾದ ಅನೇಕ ಸೌಲಭ್ಯಗಳು ಅನ್ಯರ ಪಾಲಾಗುತ್ತಿವೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಆದ್ದರಿಂದ ಬುಧವಾರ ಮಧ್ಯಾಹ್ನ 3 ಗಂಟೆಗೆ ತಮ್ಮ ಬೆಂಬಲಿಗರೊಡಗೂಡಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಎನ್. ನಾಗೇಂದ್ರ, ಅಹಮ್ಮದ್‌ಖಾನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement