ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪ್ರತಾಪ್ ಪ್ರಚಾರಕ್ಕೆ ಸಹಕರಿಸಿ: ರಾಮದಾಸ್

Rashmi Kasaragodu
Updated On : 26 Mar 2014, 1:06 am

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಮಾ.27 ರಂದು ಕೆ.ಆರ್. ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಿದ್ದು, ಕಾರ್ಯಕರ್ತರೆಲ್ಲರೂ ಅವರಿಗೆ ಸಂಪೂರ್ಣ ಬೆಂಬಲ ನೀಡಬೇಕು ಎಂದು ಮಾಜಿ ಸಚಿವ ಎಸ್.ಎ. ರಾಮದಾಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ತಮ್ಮ ನಿವಾಸದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮೂರು ಹಂತಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಬೇಕಿದೆ. ಮಾ.27 ರಂದು ಪ್ರತಾಪ್ ಸಿಂಹ ಅವರು ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 8ಕ್ಕೆ ಶ್ರೀರಾಂಪುರದಿಂದ ಪ್ರಚಾರ ಆರಂಭಿಸಿ ರಾತ್ರಿ 9 ರವರೆಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ಮಾಡುವುದಾಗಿ ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.13, 14, 15, 17, 18, 21, 22ನೇ ವಾರ್ಡ್‌ಗಳಲ್ಲಿ ಮನೆ ಮನೆ ಭೇಟಿ ಮಾಡಲಿದ್ದು, ಸಂಜೆ 5.30ಕ್ಕೆ ಶಂಕರಮಠದಲ್ಲಿ ನಡೆಯುವ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು. ಚುನಾವಣಾ ಪ್ರಚಾರದ ಮೊದಲ ಹಂತವಾಗಿ ಪ್ರತಾಪ್ ಸಿಂಹ ಅವರ ವೈಯಕ್ತಿಕ ಪರಿಚಯದ ಕರಪತ್ರವನ್ನು ಮನೆ ಮನೆಗೆ ತಲುಪಿಸುವುದು, ಎರಡನೇ ಹಂತದಲ್ಲಿ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಾರಿಗೊಳಿಸುವ ಯೋಜನೆ ಮತ್ತು ಕಳೆದ 10 ವರ್ಷದಲ್ಲಿನ ಯುಪಿಎ ಸರ್ಕಾರದ ವೈಫಲ್ಯವನ್ನು ಮತದಾರರಿಗೆ ತಿಳಿಸಬೇಕು. ಮೂರನೆ ಹಂತದಲ್ಲಿ ಮತದಾರರಿಗೆ ಅಗತ್ಯವಾದ ಗುರುತಿನ ಚೀಟಿಯ ಕ್ರಮಸಂಖ್ಯೆಯನ್ನು ಮನೆ ಮನೆಗೆ ತಲುಪಿಸಬೇಕು ಎಂದು ಕಿವಿಮಾತು ಹೇಳಿದರು.
ಚುನಾವಣಾ ಪ್ರಚಾರದ ವೇಳೆ ಪಾಲಿಕೆ ಸದಸ್ಯರು, ಆಯಾ ವಾರ್ಡ್‌ನ ಪ್ರಮುಖರು ಜೊತೆಯಲ್ಲಿರಬೇಕು ಎಂದರು. ಸಭೆಯಲ್ಲಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ಕೆ.ಆರ್. ಕ್ಷೇತ್ರದ ಎಲ್ಲಾ ವಾರ್ಡ್‌ನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಗರ ಪಾಲಿಕೆ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement