ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಯತಿರಾಜ ಶರ್ಮಾಗೆ 8 ಪದಕ

Rashmi Kasaragodu
Updated On : 26 Mar 2014, 1:09 am

ಮೈಸೂರು: ಶಾರದಾ ವಿಲಾಸ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ ಅಧ್ಯಯನ ಮಾಡಿದ ಎಂ.ವಿ. ಯತಿರಾಜ ಶರ್ಮಾ ಅವರು ಶೇ. 94 ಅಂಕಗಳಿಸುವುದರ ಮೂಲಕ 8 ಬಂಗಾರದ ಪದಕ ಹಾಗೂ 6 ನಗದು ಬಹುಮಾನ ಗಳಿಸಿದ್ದಾರೆ. ಇತ್ತೀಚಿಗೆ ನಡೆದ ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಇವರಿಗೆ ಪದಕ ಪ್ರದಾನ ಮಾಡಲಾಯಿತು. ಇವರು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ಮೂರೂ ವಿಷಯಗಳಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಅತ್ಯಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಅಪರೂಪದ ಸಾಧನೆ ಮಾಡಿದ್ದಾರೆ. ಸದ್ಯ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಗಣಿತಶಾಸ್ತ್ರದಲ್ಲಿ ಎಂ.ಎಸ್ಸಿ ಅಧ್ಯಯನ ಮಾಡುತ್ತಿರುವ ಯತಿರಾಜ ಶರ್ಮಾ ಅವರನ್ನು ಶಾರದಾ ವಿಲಾಸ ಕಾಲೇಜಿನ ಪ್ರಾಂಶುಪಾಲ ಡಾ.ಎ.ಆರ್. ನಾಗಭೂಷಣ, ಬೋಧಕರು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement