ಕಾಂಗ್ರೆಸ್ ಸಭೆ ನಾಳೆ
ಮೈಸೂರು: ಲೋಕಸಭಾ ಚುನಾವಣೆ ಅಂಗವಾಗಿ ಮಾ.30ರ ಸಂಜೆ 4.30ಕ್ಕೆ ಕುವೆಂಪುನಗರದ ಜಯಮ್ಮ ಗೋವಿಂದಗೌಡ ಕಲ್ಯಾಣ ಮಂಟಪದ ಪಕ್ಕದ ಜಾಗದಲ್ಲಿ ನಡೆಯುವ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಮಾಜಿ ಶಾಸಕ ಎಂ. ಸತ್ಯನಾರಾಯಣ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್, ಸಚಿವರು, ಶಾಸಕರು ಹಾಗೂ ಮುಖಂಡರು ಭಾಗವಹಿಸುವರು ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ಎ. ಅರಕೇಶ್ವರಯ್ಯ ಹೇಳಿದ್ದಾರೆ.