ಜಯಂತಿ ಇಂದು
ಕೆ.ಆರ್. ನಗರ: ತಾಲೂಕಿನ ಕೋಳೂರು ಗ್ರಾಮದಲ್ಲಿ ಮಾ.29 ರಂದು ಬಸವೇಶ್ವರ ದೇವಸ್ಥಾನ ಮತ್ತು ಆದಿಶಕ್ತಿ ದೊಡ್ಡಮ್ಮ ತಾಯಿ ದೇವಸ್ಥಾನದ ಮೂರ್ತಿಗಳ ಪ್ರತಿಷ್ಠಾಪನೆ, ರಾಜಗೋಪುರ ಕಳಸಾರೋಹಣ ಹಾಗೂ ಗ್ರಾಮಾಂತರ ಬಸವ ಜಯಂತಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಸಿದ್ದಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿ, ಚುಂಚನಕಟ್ಟೆ ಆದಿ ಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ, ಬೆಟ್ಟದಪುರ ಸಲಿಲಾಖ್ಯ ಮಠದ ಚನ್ನಬಸವದೇಶಿಕೇಂದ್ರ ಸ್ವಾಮೀಜಿ ಭಾಗವಹಿಸುವರು. ಶಾಸಕ ಸಾ.ರಾ. ಮಹೇಶ್ ಅಧ್ಯಕ್ಷತೆ ವಹಿಸುವರು. ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್, ಸಂಸದರಾದ ರಮ್ಯಾ, ಎಚ್. ವಿಶ್ವನಾಥ್, ಮಾಜಿ ಸಚಿವ ಎಚ್.ಡಿ. ರೇವಣ್ಣ, ಶಾಸಕರಾದ ಕೆ. ವೆಂಕಟೇಶ್, ಸಿ.ಎಚ್. ವಿಜಯಶಂಕರ್, ತಾಲೂಕು ಕಾಂಗ್ರೆಸ್ ಮುಖಂಡರಾದ ದೊಡ್ಡಸ್ವಾಮೇಗೌಡ ಭಾಗವಹಿಸುವರು. ಅಂದು ರಾತ್ರಿ 8ಕ್ಕೆ ಸಿದ್ದಗಂಗಾ ಕ್ಷೇತ್ರದ ಸಿದ್ದಲಿಂಗೇಶ್ವರ ನಾಟಕ ಮಂಡಳಿಯ ವತಿಯಿಂದ ಜಗಜ್ಯೋತಿ ಬಸವೇಶ್ವರ ನಾಟಕ ಏರ್ಪಡಿಸಿದೆ. ಕಾರ್ಯಕ್ರಮದಲ್ಲಿ ಭಕ್ತಾದಿಗಳು ಭಾಗವಹಿಸಬೇಕೆಂದು ಗ್ರಾಮಸ್ಥರು ಕೋರಿದ್ದಾರೆ.
ಧ್ರುವ ಪರ ಪ್ರಚಾರ
ತಾಂಡವಪುರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಪರವಾಗಿ ಕಾಂಗ್ರೆಸ್ ಯುವ ಮುಖಂಡ ರಾಕೇಶ್ ಸಿದ್ದರಾಮಯ್ಯ ನಂಜನಗೂಡು ತಾಲೂಕು ಕೊಣನೂರು ಗ್ರಾಪಂ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ನಂತರ ಮಾತನಾಡಿದ ಅವರು, ಕಳೆದ ಬಾರಿ ನಮ್ಮ ತಂದೆ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ ಮುಖ್ಯಮಂತ್ರಿಯಾಗಲು ಕಾರಣಕರ್ತರಾಗಿದ್ದೀರಿ. ಅದೇ ರೀತಿ ಈ ಬಾರಿಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್. ಧ್ರುವನಾರಾಯಣ್ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಇದೇ ವೇಳೆ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ರಂಗಸ್ವಾಮಿ, ತಾಪಂ ಸದಸ್ಯ ಗೋವಿಂದರಾಜು, ಜಿಪಂ ಮಾಜಿ ಅಧ್ಯಕ್ಷ ಎಸ್.ಇ ಬಸವರಾಜು, ಧರ್ಮೇಂದ್ರ ರಾಜು, ಮುಖಂಡರಾದ ಟಿ.ಕೆ ಮಾಲೇಗೌಡ, ದಾಸನೂರು ನಾಗೇಶ, ಸುರೇಶ್ಬಾಬು, ವಿಶ್ವಕರ್ಮ ಮಹಾಸಭಾದ ಜಿಲ್ಲಾಧ್ಯಕ್ಷ ನಂದಕುಮಾರ್, ಅರ್ಕೇಶ್, ರೇವಣ್ಣ, ಮಾದಪ್ಪ, ನಾಗೇಂದ್ರ , ಮಾದಪ್ಪ, ಬಸವರಾಜಪ್ಪ ಭಾಗವಹಿಸಿದ್ದರು.
ಬೆಂಕಿಗೆ ಬೆಳೆ ಹಾನಿ
ಪಿರಿಯಾಪಟ್ಟಣ: ತೋಟಕ್ಕೆ ಬೆಂಕಿ ಬಿದ್ದು ಸಾವಿರಾರು ರು. ಬೆಲೆ ಬಾಳುವ ಬೆಳೆ ನಾಶವಾಗಿರುವ ಘಟನೆ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಜರುಗಿದೆ. ಗ್ರಾಮದ ಮನೋನ್ಮಣಿ ಎಂಬವರಿಗೆ ಸೇರಿದ ತೋಟಕ್ಕೆ ಬೆಂಕಿ ಬಿದ್ದು, ಸುಮಾರು 4 ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಅಡಕೆ, ತೆಂಗು, ಬಾಳೆ ಸೇರಿದಂತೆ ಇತರೆ ತೋಟಗಾರಿಕಾ ಬೆಳೆಗಳು ಹಾಗೂ ಬೆಲೆ ಬಾಳುವ ಮರಗಳು ಸುಟ್ಟು ಹೋಗಿವೆ. ಈ ಹಿಂದೆ ಇದೇ ತೋಟದಲ್ಲಿ ಬೆಲೆ ಬಾಳುವ ತೇಗದ ಮರಗಳು ಕಳ್ಳತನವಾಗಿದ್ದವು ಎಂದು ತೋಟದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಮಲ್ಲಪ್ಪಗೌಡ ತಿಳಿಸಿದ್ದಾರೆ. ತೋಟಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಬಗ್ಗೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದು, ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ತೋಟದ ಸುತ್ತಮುತ್ತಲಿನ ರೈತರು ಆಗ್ರಹಿಸಿದ್ದಾರೆ.
ಸಿಲಿಂಡರ್ ವಿತರಣೆ
ಅಂತರಸಂತೆ: ಅಂತರಸಂತೆ ಹೋಬಳಿ ವ್ಯಾಪ್ತಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಸೇರಿದ ಕಾಡಂಚಿನ ಗ್ರಾಮಗಳ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ಅಡುಗೆ ಅನಿಲ ವಿತರಿಸಲಾಗಿದೆ. ಕಾಡಂಚಿನ ಗ್ರಾಮಗಳ ನಿವಾಸಿಗಳು ಅರಣ್ಯ ಪ್ರವೇಶಿಸದಂತೆ ಮಾಡಲು ಅಂತರಸಂತೆ ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಕುಮಾರ್ ಪೈ ಸುಮಾರು 590 ಗ್ಯಾಸ್ ಸಿಲಿಂಡರ್ಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಯಿತು. ಈ ವೇಳೆ ವನಪಾಲಕರಾದ ಶಿವರಾಮ್ ಮತ್ತು ನರಸಿಂಹಮೂರ್ತಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.