ತರಬೇತಿ ಇಂದು
ಎಚ್.ಡಿ. ಕೋಟೆ: ಕ್ಷೇತ್ರದ ಚುನಾವಣಾ ಅಧಿಕಾರಿ, ಸಿಬ್ಬಂದಿಗೆ ಮಾ.29ರಂದು ಮೊದಲನೇ ಚುನಾವಣಾ ತರಬೇತಿಯನ್ನು ಸೆಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9ಕ್ಕೆ ಪಿಆರ್ಒ ಮತ್ತು ಎಪಿಆರ್ಒಗಳಿಗೆ ತರಬೇತಿ ನಡೆಯಲಿದೆ ಹಾಗೂ ಮಧ್ಯಾಹ್ನ 2.30ಕ್ಕೆ ಮೊದಲನೆ ಮತ್ತು ಎರಡನೇ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯಲಿದೆ. ಈ ತರಬೇತಿಗೆ 265 ಪಿಆರ್ಒ, 234 ಎಪಿಆರ್ಒ ಹಾಗೂ 747 ಪಿಒಗಳನ್ನು ನಿಯೋಜಿಸಿದೆ. ತರಬೇತಿಗೆ ನಿಯೋಜಿಸಲಾಗಿರುವ ಸಿಬ್ಬಂದಿ ಕಡ್ಡಾಯವಾಗಿ ತರಬೇತಿಗೆ ಹಾಜರಾಗುವುದು. ತರಬೇತಿಯಲ್ಲಿ ಮತಗಟ್ಟೆ ಅಧಿಕಾರಿಗಳ ಕರ್ತವ್ಯ, ಜವಾಬ್ದಾರಿ ಹಾಗೂ ಚುನಾವಣಾ ಕಾರ್ಯ, ಮತಯಂತ್ರಗಳ ಬಗ್ಗೆ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಬೇತಿಯನ್ನು ಪಿಪಿಟಿ, ಹ್ಯಾಂಡ್ಸ್ ಆನ್ ವ್ಯವಸ್ಥೆ ಮೂಲಕ ನೀಡಲಾಗುವುದು ಎಂದು ಸಹಾಯಕ ಚುನಾವಣಾಧಿಕಾರಿ ಡಾ.ಕಾ. ರಾಮೇಶ್ವರಪ್ಪ ತಿಳಿಸಿದ್ದಾರೆ.
ದೂರು ಸ್ವೀಕಾರ
ಮೈಸೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮುಂಬೈ ಆದಾಯ ತೆರಿಗೆ ಇಲಾಖೆಯ ಜಿತೇಂದ್ರ ಯಾದವ್ ಅವರನ್ನು ಚುನಾವಣಾ ವೆಚ್ಚ ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಮಾ.31 ಹಾಗೂ ಏ.1 ರಂದು ಬೆಳಗ್ಗೆ 10 ರಿಂದ 11ರವರೆಗೆ ಬಿ.ಎಂ. ಆಸ್ಪತ್ರೆಯ ಎದುರಿನ ಸಿಐಐಎಲ್ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸುವರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಮೊ. 9448289200.
ಜೆಡಿಎಸ್ಗೆ ನೇಮಕ
ಮೈಸೂರು: ಜೆಡಿಎಸ್ ಮಹಿಳಾ ಘಟಕದ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಕಲ್ಯಾಣಗಿರಿಯ ಪರ್ವಿನ್ ಜಹಾನ್ ಅವರನ್ನು ನೇಮಕ ಮಾಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.