ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ವಾಣಿಜ್ಯ ಒಪ್ಪಂದ ಸಹಿ ಹಾಕುವುದು ಅಗತ್ಯ

Rashmi Kasaragodu
Updated On : 29 Mar 2014, 2:02 am


ಹುಣಸೂರು: ಅಭಿವೃದ್ಧಿಶೀಲ ರಾಷ್ಟ್ರಗಳು ವಿಶ್ವ ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕುವುದು ಅನಿವಾರ್ಯವಾಗಿದೆ ಎಂದು ಕೃಷ್ಣರಾಜ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಎನ್.ಎಸ್. ಬಾಲಸುಬ್ರಮಣ್ಯಂ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಭಾರತದ ಸಂದಾಯ ಬಾಕಿಯ ಮೇಲೆ ವಿಶ್ವವಾಣಿಜ್ಯ ಒಪ್ಪಂದದ ಪರಿಣಾಮ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವ ವಾಣಿಜ್ಯ ಒಪ್ಪಂದಕ್ಕೆ ಭಾರತ ಸಹಿ ಹಾಕಿರುವುದು ದೇಶಕ್ಕೆ ಕೆಲವು ಅನಾನುಕೂಲಗಳನ್ನು ತಂದೊಡ್ಡಿದರೂ ಈಗ ಆಗಿರುವ ಅನುಕೂಲಗಳನ್ನು ಕಡೆಗಣಿಸುವಂತಿಲ್ಲ ಎಂದರು.
ಭಾರತ ಪ್ರಸ್ತುತ ಕೊರತೆ ಸಂದಾಯ ಬಾಕಿಯನ್ನು ಅನುಭವಿಸುತ್ತಿದ್ದು ಇದು ನೀಗಬೇಕೆಂದರೆ ಆಮದು ನೀತಿ ಪರಿಷ್ಕರಿಸಬೇಕು. ಇಲ್ಲದಿದ್ದರೆ ಹೆಚ್ಚಿನ ಮಟ್ಟದ ಸುಂಕ ವಿಧಿಸುವ ಮೂಲಕ ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳಬೇಕಾಗುತ್ತದೆ.
ವಿದೇಶಿ ನೇರ ಬಂಡವಾಳಕ್ಕೆ ವಾಣಿಜ್ಯ ಒಪ್ಪಂದ ಪ್ರೋತ್ಸಾಹಿಸುತ್ತಿದ್ದು ಇದರಿಂದ ಆರ್ಥಿಕ ಕ್ಷೇತ್ರದಲ್ಲಿ ಹಾಗೂ ದೇಶದ ನಿರುದ್ಯೋಗಿ ಯುವಕರಲ್ಲಿ ಉದ್ಯೋಗ ಸೃಷ್ಟಿ ಸಾಧ್ಯವಿದೆ ಎಂದರು.
ಡಿ.ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎ. ಆನಂದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಚಾಲಕ ಪುಟ್ಟಶೆಟ್ಟಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement