ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಮರ್ಪಕ ನೀರು ಪೂರೈಕೆಗೆ ಆಗ್ರಹ

Rashmi Kasaragodu
Updated On : 29 Mar 2014, 2:02 am

ಪಿರಿಯಾಪಟ್ಟಣ: ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ತಾಲೂಕಿನ ಕಗ್ಗುಂಡಿ ಗ್ರಾಮದ ಮಹಿಳೆಯರು ಹಾಗೂ ಮಕ್ಕಳು ಖಾಲಿ ಬಿಂದಿಗೆ ಹಿಡಿದು ಪ್ರತಿಭಟಿಸಿದರು. ಗ್ರಾಮದಲ್ಲಿ ಒಂದು ತಿಂಗಳಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ನೀರಿನ ಸಮಸ್ಯೆ ಹೆಚ್ಚಾಗಿದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ತಿಳಿಸಿದರೂ ಈವರೆಗೆ ಪ್ರಯೋಜನವಾಗಿಲ್ಲ ಎಂದು ಗ್ರಾಮದ ಮುಖಂಡ ರಾಜೇಗೌಡ ಆರೋಪಿಸಿದರು. 1,500 ಜನಸಂಖ್ಯೆಯುಳ್ಳ ಕಗ್ಗುಂಡಿ ಗ್ರಾಮದಲ್ಲಿದ್ದು, ಒಂದು ಬೋರ್ವೆಲ್ ಇದ್ದು, ಅಂತರ್ಜಲ ಕುಸಿತದಿಂದಾಗಿ ಬೋರ್ವೆಲ್ ಗಂಟೆಗಟ್ಟಲೆ ಒತ್ತಿದರೂ ನೀರು ಬರುತ್ತಿಲ್ಲ. ಸಂಬಂಧಪಟ್ಟವರು ತಕ್ಷಣ ಗ್ರಾಮದಲ್ಲಿನ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರಲ್ಲದೆ, ಗ್ರಾಪಂಗೆ ಆಯ್ಕೆಯಾಗಿರುವ ಸದಸ್ಯರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಎರಡು ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದಲ್ಲಿ ರಾಮನಾಥತುಂಗ ಗ್ರಾಪಂ ಮುಂಭಾಗ ಪ್ರತಿಭಟನಾ ಧರಣಿ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು. ಗ್ರಾಮಸ್ಥರಾದ ಸುಗುಣಮ್ಮ, ದಿನೇಶ್, ಕಮಲಮ್ಮ, ಸೌಮ್ಯ, ಎಲ್ಲಮ್ಮ, ಲಕ್ಷ್ಮಿ, ಕಾಮಾಕ್ಷಿ, ಸರೋಜಮ್ಮ, ರೇಣುಕಾ, ಭಾಗ್ಯ, ಹೊನ್ನಮ್ಮ, ಮಹೇಶ್, ನಂಜಪ್ಪ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement