ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಹಿರಿಯ ಸಾಹಿತಿ ಪಂಡಿತ ನಾಗರಾಜಯ್ಯ ನಿಧನ

Rashmi Kasaragodu
Updated On : 29 Mar 2014, 2:34 am

ಮೈಸೂರು: ಹಿರಿಯ ಸಾಹಿತಿ ಹಾಗೂ ನಿವೃತ್ತ ಉಪನ್ಯಾಸಕ ಪಂಡಿತ ನಾಗರಾಜಯ್ಯ (87) ಶುಕ್ರವಾರ ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ಜೆ.ಪಿ. ನಗರದ ತಮ್ಮ ನಿವಾಸದಲ್ಲಿ ನಿಧನರಾದರು.
ಬರಹಗಾರ ನಾ. ಮಹಾವೀರ ಪ್ರಸಾದ್ ಸೇರಿದಂತೆ ಇಬ್ಬರು ಪುತ್ರರು ಇದ್ದಾರೆ. ಪಂಪನ ಆದಿಪುರಾಣ ದೀಪಕೆ, ರನ್ನನ ಅಜಿತ ಪುರಾಣ ಸೇರಿದಂತೆ ನೂರಕ್ಕೂ ಹೆಚ್ಚು ಕೃತಿಗಳನ್ನು ಹಾಗೂ ಸಾವಿರಾರು ಮೌಲಿಕ ಲೇಖನಗಳನ್ನು ಬರೆದಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಹಾಸನ ಹಾಗೂ ಮೈಸೂರು ಜಿಲ್ಲಾ ಘಟಕಗಳ ಕಾರ್ಯದರ್ಶಿಯಾಗಿ ಸುಮಾರು 30 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಹೊಂಬುಜ ಮಠದ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಪ್ರಶಸ್ತಿ, ಶ್ರವಣಬೆಳಗೊಳದ ಗೊಮ್ಮಟೇಶ ವಿದ್ಯಾ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು. ಕಳೆದ ವರ್ಷ ಎಚ್.ಡಿ. ಕೋಟೆಯಲ್ಲಿ ನಡೆದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಮೃತರ ಅಂತ್ಯ ಸಂಸ್ಕಾರ ಶನಿವಾರ ಬೆಳಗ್ಗೆ 9 ಕ್ಕೆ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement