ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಶಾಂತಿಯುತವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ

Rashmi Kasaragodu
Updated On : 30 Mar 2014, 2:05 am

ಮೈಸೂರು: ಜಿಲ್ಲಾದ್ಯಂತ ಆರಂಭವಾದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯು ಶುಕ್ರವಾರ ಶಾಂತಿಯುತವಾಗಿ ನಡೆಯಿತು. ಜಿಲ್ಲೆಯಲ್ಲಿ 42,797 ಮಂದಿ ಪರೀಕ್ಷೆ ತೆಗದುಕೊಂಡಿದ್ದು, ಅವರಲ್ಲಿ ಹೊಸಬರು 40,577 ಮತ್ತು 2,220 ಪುನರಾರ್ತಿತ ವಿದ್ಯಾರ್ಥಿಗಳಿದ್ದಾರೆ. ಶುಕ್ರವಾರ ನಡೆದ ಪ್ರಥಮ ಭಾಷೆ ಪರೀಕ್ಷೆಯಲ್ಲಿ 41,417 ಮಂದಿ ಹಾಜರಾಗಿದ್ದು, 1380 ಮಂದಿ ಗೈರು ಹಾಜರಾಗಿದ್ದರು. ಜಿಲ್ಲೆಯ ಒಟ್ಟು 147 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪ್ರತಿ ಕೇಂದ್ರಗಳಲ್ಲೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪೀಠೋಪಕರಣದ ವ್ಯವಸ್ಥೆ ಮಾಡಲಾಗಿತ್ತು. ಅಕ್ರಮಗಳನ್ನು ತಡೆಗಟ್ಟಲು ಸೂಕ್ತ ಎಚ್ಚರ ವಹಿಸಲಾಗಿತ್ತು. ಪರೀಕ್ಷಾ ಕ್ಷೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು ಎಂದು ಡಿಡಿಪಿಐ ಎಚ್.ಆರ್. ಬಸಪ್ಪ ಕನ್ನಡಪ್ರಭಕ್ಕೆ ತಿಳಿಸಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಗೊಂದಲಗಳಿದ್ದರೆ ನೋಡಲ್ ಅಧಿಕಾರಿ ನಾಗರಾಜ್- 99019 13268 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement