ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಎಎಪಿ ಮತ ಯಾಚನೆ

Rashmi Kasaragodu
Updated On : 30 Mar 2014, 11:33 am

ಮೈಸೂರು: ಮೈಸೂರು- ಕೊಡಗು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಂ. ವಿ. ಪದ್ಮಮ್ಮ ಪರ ಭಾನುವಾರ ಮತಯಾಚನೆ ನಡೆಯಿತು. ದೇವರಾಜ ಮಾರುಕಟ್ಟೆಯ ವಿವಿಧ ವ್ಯಾಪಾರಸ್ಥರ ಮಳಿಗೆಗೆ ತೆರಳಿ ಕರಪತ್ರ ಹಂಚಿದ ಕಾರ್ಯಕರ್ತರು ಪಕ್ಷಕ್ಕೆ ಮತ ನೀಡಿ ಬೆಂಬಲಿಸುವಂತೆ ಮನವಿ ಮಾಡಿದರು. ಎಎಪಿ ಜಿಲ್ಲಾ ಸಂಚಾಲಕ ಎಂ.ಎಸ್. ವಿನೋದ್ ಮಾತನಾಡಿದರು. ಇದಕ್ಕೂ ಮುನ್ನ ಹೂಟಗಳ್ಳಿ ಗ್ರಾಮದ ಮನೆ ಮನೆಗೆ ತೆರಳಿ ಮತಯಾಚಿಸಿದರಲ್ಲದೇ, ಇಲ್ಲಿನ ಸಂತೇಮಾಳದಲ್ಲಿನ ವ್ಯಾಪಾರಸ್ಥರು ಹಾಗೂ ಗ್ರಾಹಕರಿಗೂ ಮತ ಹಾಕುವಂತೆ ಮನವಿ ಮಾಡಿದರು.  ಮುಖಂಡರಾದ ಶ್ಯಾಮಲಾ, ಅಶೋಕ್ ಜಾದವ್, ವಿದ್ಯಾರಣ್ಯ, ಕಮಲ, ಶರತ್ ಇದ್ದರು.  


ರೈತಪರ ಪಕ್ಷಕ್ಕೆ ಬೆಂಬಲ


ಮೈಸೂರು: ರೈತರ ಬಹುಮುಖ್ಯ ಬೇಡಿಕೆಗಳನ್ನು ಈಡೇರಿಸುವ ಪಕ್ಷಕ್ಕೆ ಈ ಬಾರಿಯ ಚುನಾವಣೆಯಲ್ಲಿ ಬೆಂಬಲ ನೀಡುವ ಸಂಬಂಧ ಏ. 10ರ ನಂತರ ತೀರ್ಮಾನಿಸುವುದಾಗಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.ಡಾ.ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ರೈತರ ಬೆಳೆಗಳಿಗೆ ಬೆಂಬಲ  ಬೆಲೆ ನಿಗದಿಪಡಿಸಬೇಕು. ಶೇ. 4 ರಷ್ಟು ಮಂದಿ ಇರುವ ಸರ್ಕಾರಿ ನೌಕರರಿಗೆ ವೇತನ ಆಯೋಗ ಇರುವಂತೆ ಶೇ.70ರಷ್ಟಿರುವ ರೈತರಿಗೆ ಕನಿಷ್ಠ ಆದಾಯ ಭದ್ರತೆ ಕಾಯ್ದೆ ಜಾರಿಗೊಳಿಸಬೇಕು. ಕೇಂದ್ರ ಕೃಷಿ ಬೆಲೆ ನಿಗದಿ ಆಯೋಗಕ್ಕೆ ಸಂಪೂರ್ಣ ಸ್ವಾಯತ್ತತೆ ನೀಡಬೇಕು, ಕೃಷಿಕರಿಗೂ ಗೌರವ ಡಾಕ್ಟರೇಟ್, ವಿಧಾನ ಪರಿಷತ್‌ಗೆ ನಾಮಕರಣ ಮಾಡಬೇಕು, ರೈತರ ಮಕ್ಕಳಿಗೆ ಮೀಸಲಾತಿ ಸೌಲಭ್ಯ ದೊರಕಬೇಕು ಎಂಬುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ತಲಕಾಡು ಸಮೀಪದ ಮಾಧವ ಮಂತ್ರಿ ಅಣೆಕಟ್ಟೆಯಿಂದ ನೀರು ಬಿಡುವುದನ್ನು ಏಕಾಏಕಿ ನಿಲ್ಲಿಸಿದ್ದಾರೆ. ಈ ಸಂಬಂಧ ಅಧಿಕಾರಿಗಳನ್ನು ವಿಚಾರಿಸಿದರೆ ಯಾರೋ ರೈತರು ನೀರು ನಿಲ್ಲಿಸುವಂತೆ ಸೂಚಿಸಿರುವುದಾಗಿ ತಿಳಿಸುತ್ತಾರೆ. ಆದರೆ ಇದರ ಹಿಂದೆ ಸಚಿವ ಮಹೇದವಪ್ಪ ಕುಟುಂಬದ ಕೈವಾಡ ಇದೆ. ವಿದ್ಯುತ್ ಪೂರೈಕೆ, ನೀರು ಪೂರೈಕೆಗೂ ನೀತಿ ಸಂಹಿತೆ ನೆಪ ಹೇಳುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅತ್ತಹಳ್ಳಿ ದೇವರಾಜ್, ಶಂಕರ್, ಪುರುಷೋತ್ತಮ್, ಗುರುಸ್ವಾಮಿ, ಪರಶಿವಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments