ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

'ಎಲ್ಲ ವರ್ಗದ ಬಡವರಿಗೆ ಅನುಕೂಲ'

Rashmi Kasaragodu
Updated On : 30 Mar 2014, 11:34 am

ಮೈಸೂರು:  ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವಾರು ಜನಪರ ಕಾರ್ಯಕ್ರಗಳನ್ನು ತಂದಿದ್ದು, ಇದರಿಂದ ಎಲ್ಲ ಜಾತಿಯ ಬಡವರಿಗೆ ಅನುಕೂಲವಾಗಿದೆ ಎಂದು ಮಾಜಿ ಶಾಸಕ ಎಂ. ಸತ್ಯನಾರಾಯಣ ಅಭಿಪ್ರಾಯಪಟ್ಟರು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ರಮ್ಮನಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಎಚ್. ವಿಶ್ವನಾಥ್ ಪರವಾಗಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿರುವ ಕಾಂಗ್ರೆಸ್ ಬೆಂಬಲಿಸಬೇಕು
ಎಂದು ಮನವಿ ಮಾಡಿದರು.
ಕೆಪಿಸಿಸಿ ಸದಸ್ಯ ಕೆ. ಮರೀಗೌಡ ಮಾತನಾಡಿ, ರಮ್ಮನಹಳ್ಳಿಯಲ್ಲಿ ಪ್ರೌಢಶಾಲೆ, ಆಸ್ಪತ್ರೆ, ಗರಡಿಮನೆ, ಒಳಚರಂಡಿ, ವಿದ್ಯುತ್ ಇತರೆ ಸಮಸ್ಯೆಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಬಗೆಹರಿಸಲಾಗುವುದು ಎಂದರು.ಜಿಪಂ ಅಧ್ಯಕ್ಷ ಕೂರ್ಗಳ್ಳಿ ಎಂ. ಮಹದೇವು, ಸದಸ್ಯೆ ಶಕುಂತಲಾ ವೆಂಕಟಯ್ಯ, ಇಲವಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಕೆ. ಬಸವಣ್ಣ, ಮುಖಂಡರಾದ ಮೆಲ್ಲಹಳ್ಳಿ ಮಹದೇವಸ್ವಾಮಿ, ಕೆ. ಸಾಲುಂಡಿ ಪ್ರಭುಸ್ವಾಮಿ, ಲಿಂಗಮ್ಮಣ್ಣಿ, ಬಸಪ್ಪ, ನಾಗರಾಜು, ಚಿಕ್ಕಣ್ಣೇಗೌಡ, ಗ್ರಾಪಂ ಉಪಾಧ್ಯಕ್ಷ ಮಂಜುನಾಥ್ ಉಪಸ್ಥಿತರಿದ್ದರು.                      

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement