ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಚುನಾವಣೆ: ಜನಜಾಗೃತಿ ಸಮಿತಿ ರಚನೆ

Rashmi Kasaragodu
Updated On : 30 Mar 2014, 11:33 am

ಮೈಸೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಮಾಜ ರಕ್ಷಣಾ ವೇದಿಕೆ ವತಿಯಿಂದ ಜನ ಜಾಗೃತಿ ಸಮಿತಿ ರಚಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಅಯೂಬ್‌ಖಾನ್ ತಿಳಿಸಿದರು. ಎಲ್ಲಾ ರಾಜಕೀಯ ಪಕ್ಷಗಳೂ ಜನರನ್ನು ಮರಳು ಮಾಡುತ್ತಿವೆ. ಒಬ್ಬರು ಭಾರತ ಗೆಲ್ಲಿಸಿ ಎಂದರೆ, ಮತ್ತೊಬ್ಬರು ಭಾರತ ನಿರ್ಮಾಣ ಮಾಡಿ ಎಂದು ಹೇಳುತ್ತಾರೆ. ಇನ್ನು ತೃತೀಯ ರಂಗಕ್ಕೂ ಭಾರತದಲ್ಲಿ ಭವಿಷ್ಯವಿಲ್ಲ. ಈ ನಿಟ್ಟಿನಲ್ಲಿ ಯಾರಿಗೆ ಮತ ಹಾಕಬೇಕು ಎಂಬ ಗೊಂದಲದಲ್ಲಿದ್ದಾರೆ. ಆದ್ದರಿಂದ ಏ. 8 ರಂದು ಎಲ್ಲಾ ಪಕ್ಷದ ಅಭ್ಯರ್ಥಿಗಳ ಜೊತೆ ಸಂವಾದ ಕಾರ್ಯಕ್ರಮ ಆಯೋಜಿಸಲು ವೇದಿಕೆ ತೀರ್ಮಾನಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ವಿಧಾನಪರಿಷತ್ ಸದಸ್ಯ ಗೋ. ಮಧುಸೂದನ್ ಮ್ಯಾಜಿಕ್ ಪ್ರಚಾರ ಮಾಡಲು ಹೋಗಿ ಸಿಕ್ಕಿಬಿದ್ದಿರುವುದು ನಾಚಿಕೆಗೇಡು ಎಂದರು.


'ಸದೃಢ ವ್ಯವಸ್ಥೆಗೆ ಮತದಾನ ಅಗತ್ಯ'
ಮೈಸೂರು: ಪ್ರಜಾಪ್ರಭುತ್ವದ ಬೆನ್ನೆಲುಬು ಪ್ರಜೆಗಳು ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮತದಾನ ಅಗತ್ಯ. ಪ್ರತಿಯೊಬ್ಬರು ಮರೆಯದೆ ಏ. 17 ರಂದು ಮತದಾನ ಮಾಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎನ್.ಆರ್. ವಿಜಯ್ ಮನವಿ ಮಾಡಿದರು. ನಗರದ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ  ಮಾತನಾಡಿದ ಅವರು, ಮತದಾನದ ಅಗತ್ಯವನ್ನು ಮನಗಂಡು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯುವ ಮತದಾನದಲ್ಲಿ ತಪ್ಪದೆ ಪಾಲ್ಗೊಳ್ಳಿ ಎಂದರು. ವಾರ್ತಾ ಇಲಾಖೆಯ ಉಪನಿರ್ದೇಶಕ ಎ.ಆರ್. ಪ್ರಕಾಶ್ ಮತ್ತಿತರರು ಮಾತನಾಡಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement