ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ
ಕ.ಪ್ರ.ವಾರ್ತೆ ಮೈಸೂರು ಮೇ 2
ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸಲಾಯಿತು.
ಕರ್ನಾಟಕ ರಾಜ್ಯ ಭಾರತಮಾತ ಕಟ್ಟಡ ಕಾರ್ಮಿಕರ ಸಂಘದ ಎನ್.ಆರ್. ಮೊಹಲ್ಲಾ ಶಾಖೆಯ ವತಿಯಿಂದ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಸಂದೇಶ್ಸ್ವಾಮಿ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸಿದರು. ಮುಖ್ಯ ಅತಿಥಿಯಾಗಿ ಮಾತಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶಂ ಅವರು, ಕಟ್ಟಡ ಕಾರ್ಮಿಕರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನೀಡುವ ಸವಲತ್ತುಗಳ ಬಗ್ಗೆ ವಿವರಿಸಿದರು. ಸಂಘದ ರಾಜ್ಯಾಧ್ಯಕ್ಷ ಜಿ.ಸಿದ್ದರಾಜು ಮಾತನಾಡಿ, ಕಟ್ಟಡ ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಇಎಸ್ಐ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿದರು.