ವಿಜಯಶಂಕರ್ ಪುತ್ರಿ ವಿವಾಹಕ್ಕೆ ಗಣ್ಯರ ದಂಡು
ಕ.ಪ್ರ.ವಾರ್ತೆ | ಮೈಸೂರು |ಮೇ 2
ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್ ಅವರ ಪುತ್ರಿಯ ವಿವಾಹ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಭಾಗವಹಿಸಿದ್ದರು.
ನಗರದ ದಟ್ಟಗಳ್ಳಿಯ ಸಾ.ರಾ. ಕನ್ವೆನ್‌ಷನ್ ಹಾಲ್‌ನಲ್ಲಿ ನಡೆದ ಸಿ.ಎಚ್.ವಿಜಯಶಂಕರ್ ಅವರ ಪುತ್ರಿ ವಿ.ಎಚ್. ಭವಾನಿ ಮತ್ತು ಬೆಂಗಳೂರು ವಿಟಿಯು ಕೇಂದ್ರದ ಸಹ ಪ್ರಾಧ್ಯಾಪಕ ಡಾ.ಸಿ.ಎಸ್. ಆನಂದಕುಮಾರ್ ಅವರ ವಿವಾಹ ಆರತಕ್ಷತೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಕಾಗಿನೆಲೆ ಶ್ರೀಗಳು, ಹಿರಿಯ ಸಾಹಿತಿ ಡಾ.ದೇಜಗೌ ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್ ಭಾಗವಹಿಸಿದ್ದರು.
ಮುಖ್ಯಮಂತ್ರಿಗಳೊಡನೆ ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್, ಮಾಜಿ ಸಚಿವ ಎಚ್.ಎಂ. ರೇವಣ್ಣ ಆಗಮಿಸಿದ್ದರು. ಮಾಜಿ ಸಚಿವರಾದರಾಮದಾಸ್, ಎಂ.ಪಿ. ಅಪ್ಪಚ್ಚು ರಂಜನ್, ಶಾಸಕರಾದ ಜಿ.ಟಿ. ದೇವೇಗೌಡ, ವಾಸು, ತನ್ವೀರ್‌ಸೇಠ್, ಎಚ್.ಪಿ. ಮಂಜುನಾಥ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.