ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಹಲವು ಗ್ರಾಮಗಳಿಗೆ ಅಮಿತಾ ಪ್ರಸಾದ್ ಭೇಟಿ

Rashmi Kasaragodu
Updated On : 9 May 2014, 12:22 pm

ಮೈಸೂರು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಅಮಿತಾ ಪ್ರಸಾದ್ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿದರು.
ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ತಾಲೂಕಿನ ಜಟ್ಟಿಹುಂಡಿ, ಬೀರಿಹುಂಡಿ ಮತ್ತು ಶೆಟ್ಟಿನಾಯಕನಹಳ್ಳಿ, ಎಚ್.ಡಿ.ಕೋಟೆ ತಾಲೂಕಿನ ಜಿ.ಬಿ. ಸರಗೂರು ಮತ್ತು ಕ್ಯಾತನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಪರಿಶೀಲಿಸಿದರು.
ಜಟ್ಟಿಹುಂಡಿ ಗ್ರಾಮದಲ್ಲಿ ಟ್ಯಾಂಕರ್‌ನಿಂದ ಮೇಲ್ತೊಟ್ಟಿಗೆ ನೀರು ಶೇಖರಿಸಿ ನೀರು ಪೂರೈಸಲಾಗುತ್ತಿದೆ. ಅಂತೆಯೇ ಎಲ್ಲ ಗ್ರಾಮಗಳಲ್ಲೂ ನೀರು ಪೂರೈಕೆ ಮಾಡುವಂತೆ ನಿರ್ದೇಶಿಸಿದರು. ಶೆಟ್ಟಿನಾಯಕನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಆಗುತ್ತಿರುವ ಬಗ್ಗೆ ಗ್ರಾಮಸ್ಥರಿಂದ ಸಹಿ ಪಡೆದು ದಾಖಲೆ ಇಡುವಂತೆ ತಿಳಿಸಿದರು.
ಬೀರಿಹುಂಡಿ ಹಾಗೂ ಜಿ.ಬಿ. ಸರಗೂರು ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರಗಳಿಗೂ ಭೇಟಿ ನೀಡಿ ಅಲ್ಲಿನ ಮಕ್ಕಳು ಹಾಗೂ ಅಂಗನವಾಡಿ ಶಿಕ್ಷಕರ ಜೊತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯಕ್ರಮ ಅನುಷ್ಠಾನ ಮತ್ತು ಮಕ್ಕಳಿಗೆ ಪೌಷ್ಟಿಕಾಂಶ ಹೆಚ್ಚಿಸುವ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಸಿ.ಶಿಖಾ, ಸಿಇಒ ಪಿ.ಎ.ಗೋಪಾಲ್, ಸೋಮಶೇಖರ್, ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎನ್.ಆರ್. ವಿಜಯ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement