ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕ್ರಿಯಾಶೀಲ ಶಕ್ತಿ ವಿಕಸನಕ್ಕೆ ಶಿಬಿರ ಸಹಕಾರಿ

Rashmi Kasaragodu
Updated On : 9 May 2014, 11:43 am

ಮೈಸೂರು: ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಕ್ರಿಯಾಶೀಲ ಶಕ್ತಿ ಹೊರ ಹೊಮ್ಮುತ್ತದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ನಗರ ಘಟಕದ ಸಂಚಾಲಕ ಆರ್.ಅನಂತರಾಮು ಹೇಳಿದರು.
ಕರ್ನಾಟರ ರಾಜ್ಯ ವಿಜ್ಞಾನ ಪರಿಷತ್ತು, ಮೈಸೂರು ವಿಜ್ಞಾನ ಕೇಂದ್ರ ಹಾಗೂ ರೋಟರಿ ಕ್ಲಬ್ ಮೈಸೂರು ಪಶ್ಚಿಮ ಸಂಯುಕ್ತಾಶ್ರಯದಲ್ಲಿ ನಡೆದ ಹತ್ತು ದಿನದ ಉಚಿತ ಬೇಸಿಗೆ ವಿಜ್ಞಾನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ವಿಜ್ಞಾನದಲ್ಲಿ ಆಸಕ್ತಿ ಮೂಡಿಸಲು ಹಾಗೂ ವಿಜ್ಞಾನ ಕಲಿಯಲು ಹೆಚ್ಚು ಆಸಕ್ತರಾಗಲು ಈ ಶಿಬಿರವು ಉಪಯೋಗವಾಗಿದೆ. ವಿದ್ಯಾರ್ಥಿಗಳು ಇಲ್ಲಿ ಕಲಿತಿರುವ ವಿಷಯಗಳನ್ನು ಚೆನ್ನಾಗಿ ಅಧ್ಯಯನ ಮಾಡಿ ವಿಷಯಗಳನ್ನು ಕಲಿತು ಜ್ಞಾನಾರ್ಜನೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಪದವೀಧರರ ಸಹಕಾರ ಬ್ಯಾಂಕ್ ಅಧ್ಯಕ್ಷ ಟಿ.ಎಸ್. ರವಿಶಂಕರ್ ಮಾತನಾಡಿ, ವಿದ್ಯಾರ್ಥಿಗಳು ಶಿಬಿರದಲ್ಲಿ ಕಲಿತಿರುವ ವಿಷಯಗಳು ನಮ್ಮ ಮುಂದಿನ ಜೀವನದಲ್ಲಿ ಬಹಳ ಉಪಯೋಗಕ್ಕೆ ಬರುತ್ತದೆ. ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಆಸಕ್ತಿ ಮೈಗೂಡಿಸಿಕೊಂಡು ವಿಜ್ಞಾನದ ಬೆಳವಣಿಗೆಗೆ ಕಾರಣರಾಗುವಂತೆ ಹೇಳಿದರು.
ರೋಟರಿ ವೆಸ್ಟ್ ಅಧ್ಯಕ್ಷ ಸಚ್ಚಿದಾನಂದ ಮಾತನಾಡಿ, ವಿಜ್ಞಾನ ಪರಿಷತ್ತು ನಡೆಸಿದ ಕಾರ್ಯಕ್ರಮಕ್ಕೆ ಮೆಚ್ಚುಗೆ ಸೂಚಿಸಿ, ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೆ ಬಹಳ ಉಪಯುಕ್ತವಾಗುತ್ತದೆ. ವಿದ್ಯಾರ್ಥಿಗಳು ಇಂತಹ ಶಿಬಿರದಲ್ಲಿ ಹೆಚ್ಚಾಗಿ ಭಾಗವಹಿಸಬೇಕು ಹಾಗೂ ಜ್ಞಾನ ಬೆಳಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ನಡೆಸಿ ಎಂದು ಕರೆ ನೀಡಿದರು.
ಕಾರ್ಯದರ್ಶಿ ರೋಟರಿ ವೆಸ್ಟ್ ಪ್ರೊ.ಶಿವಪ್ಪಗೌಡ ಅವರು ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರ, ಬಹುಮಾನ ವಿತರಿಸಿದರು. ವಿಜ್ಞಾನ ಕೇಂದ್ರದ ಆರ್. ಶ್ರೀನಿವಾಸನ್, ಶಾಲೆಯ ಮುಖ್ಯಸ್ಥ ಶಾಂತ ಭಾಗವಹಿಸಿದ್ದರು. ಶಂಕರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement