ನೂರಲಕುಪ್ಪೆ ಬಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ
ಅಂತರಸಂತೆ: ಎಚ್.ಡಿ. ಕೋಟೆ ತಾಲೂಕು ನೂರಲಕುಪ್ಪೆ ಬಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನವನ್ನು ಬಾರಿ ಸಡಗರ ಸಂಭ್ರಮಗಳಿಂದ ಆಚರಿಸಿತು. ಅಂಬೇಡ್ಕರ್ ಅವರ ಪಟಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ, ಊರಿನ ಪ್ರಮುಖ ಬೀದಿಗಳಲ್ಲಿ ಹಾಗೂ ಮಾನಂದವಾಡಿ ಮುಖ್ಯರಸ್ತೆಯ ಮೂಲಕ ನಗಾರಿ ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಿತು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ಇಲಾಖೆಯ ರಾಜು, ಗ್ರಾಪಂ ಮಾಜಿ ಅಧ್ಯಕ್ಷ ಕೆಂಪಣ್ಣ, ಗ್ರಾಪಂ ಸದಸ್ಯರಾದ ದೇವಪ್ಪ, ಶಿವಮ್ಮ ಶೇಖರ್, ಪ್ರಗತಿ ಪರ ಒಕ್ಕೂಟದ ಅಧ್ಯಕ್ಷ ಪುಟ್ಟರಾಜು ಹಾಗೂ ಮಾಜಿ ಗ್ರಾಪಂ ಸದಸ್ಯರಾದ ಮಹದೇವಯ್ಯ ಮತ್ತು ಮೈಸೂರಿನ ಮಾಜಿ ಮೇಯರ್ ಪುರುಷೋತ್ತಮ್ ಭಾಗವಹಿಸಿದ್ದರು.