ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ
ಕೆ.ಆರ್. ನಗರ: ತಾಲೂಕಿನ ಚುಂಚನಕಟ್ಟೆ ಹೋಬಳಿ ಕೇಂದ್ರದಲ್ಲಿ 60 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಮೇ 15 ರಂದು ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಮಧ್ಯಾಹ್ನ 12.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಸಾ.ರಾ. ಮಹೇಶ್ ಕಾಮಗಾರಿಗೆ ಚಾಲನೆ ನೀಡಲಿದ್ದು, ಸ್ಥಳಿಯ ಚುನಾಯಿತ ಜನಪ್ರತಿನಿಧಿಗಳು ಮತ್ತು ಸಾರಿಗೆ ನಿಗಮದ ಅಧಿಕಾರಿಗಳು ಭಾಗವಹಿಸುವರು.