ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಎನ್‌ಟಿಎಂ ಶಾಲೆ ಉಳಿಸಿ ಹೋರಾಟ 19ರಿಂದ

Rashmi Kasaragodu
Updated On : 16 May 2014, 1:27 am

ಮೈಸೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಹಾರಾಣಿ ಮಾದರಿ ಕನ್ನಡ ಶಾಲೆಯ (ಎನ್‌ಟಿಎಂಎಸ್) ಜಾಗವನ್ನು ರಾಮಕೃಷ್ಣ ಆಶ್ರಮಕ್ಕೆ ನೀಡಲು ಆದೇಶಿಸಿರುವುದನ್ನು ವಿರೋಧಿಸಿ ಮೇ 19 ರಿಂದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಶಾಲೆ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲು ಕನ್ನಡ ಕ್ರಿಯಾ ಸಮಿತಿ ನಿರ್ಧರಿಸಿದೆ. ನಗರದ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯಲ್ಲಿ ಗುರುವಾರ ಸಂಜೆ ಸಭೆ ಸೇರಿದ ಸಮಿತಿಯವರು, ಶಾಲೆ ಉಳಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರು ನೀಡಿದ ಭರವಸೆ ಹುಸಿಯಾಗಿದೆ. ಹೀಗಾಗಿ ಎನ್‌ಟಿಎಂ ಶಾಲೆ ಹೋರಾಟ ಸಮಿತಿ ಬಲಗೊಳಿಸಿ, ಶಾಲೆ ಉಳಿಸುವ ನಿಟ್ಟಿನಲ್ಲಿ ಕಾನೂನು ಸಮರ ನಡೆಸುವ ಸಂಬಂಧ ಕಾನೂನು ತಜ್ಞರೊಂದಿಗೆ ಚರ್ಚಿಸಲು ತೀರ್ಮಾನಿಸಿದರು. ನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷ ಪ.ಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಸ.ರ.ಸುದರ್ಶನ, ಉಪಾಧ್ಯಕ್ಷ ಎಂ.ಬಿ. ವಿಶ್ವನಾಥ್, ಕಾರ್ಯದರ್ಶಿ ಸಂಸ್ಕೃತಿ ಸುಬ್ರಹ್ಮಣ್ಯ, ಖಜಾಂಚಿ ಕೊ.ಸು. ನರಸಿಂಹಮೂರ್ತಿ, ಸಾಹಿತಿಗಳಾದ ಡಾ.ಜಿ.ಎಚ್. ನಾಯಕ, ಮೀರಾ ನಾಯಕ್, ನಂದಾ ಹಳೆಮನೆ, ಮಾನಸ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಜಿ.ಪಿ. ಬಸವರಾಜು ಇದ್ದರು.ಮೈಸೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಹಾರಾಣಿ ಮಾದರಿ ಕನ್ನಡ ಶಾಲೆಯ (ಎನ್‌ಟಿಎಂಎಸ್) ಜಾಗವನ್ನು ರಾಮಕೃಷ್ಣ ಆಶ್ರಮಕ್ಕೆ ನೀಡಲು ಆದೇಶಿಸಿರುವುದನ್ನು ವಿರೋಧಿಸಿ ಮೇ 19 ರಿಂದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಶಾಲೆ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲು ಕನ್ನಡ ಕ್ರಿಯಾ ಸಮಿತಿ ನಿರ್ಧರಿಸಿದೆ. ನಗರದ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯಲ್ಲಿ ಗುರುವಾರ ಸಂಜೆ ಸಭೆ ಸೇರಿದ ಸಮಿತಿಯವರು, ಶಾಲೆ ಉಳಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರು ನೀಡಿದ ಭರವಸೆ ಹುಸಿಯಾಗಿದೆ. ಹೀಗಾಗಿ ಎನ್‌ಟಿಎಂ ಶಾಲೆ ಹೋರಾಟ ಸಮಿತಿ ಬಲಗೊಳಿಸಿ, ಶಾಲೆ ಉಳಿಸುವ ನಿಟ್ಟಿನಲ್ಲಿ ಕಾನೂನು ಸಮರ ನಡೆಸುವ ಸಂಬಂಧ ಕಾನೂನು ತಜ್ಞರೊಂದಿಗೆ ಚರ್ಚಿಸಲು ತೀರ್ಮಾನಿಸಿದರು. ನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷ ಪ.ಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಸ.ರ.ಸುದರ್ಶನ, ಉಪಾಧ್ಯಕ್ಷ ಎಂ.ಬಿ. ವಿಶ್ವನಾಥ್, ಕಾರ್ಯದರ್ಶಿ ಸಂಸ್ಕೃತಿ ಸುಬ್ರಹ್ಮಣ್ಯ, ಖಜಾಂಚಿ ಕೊ.ಸು. ನರಸಿಂಹಮೂರ್ತಿ, ಸಾಹಿತಿಗಳಾದ ಡಾ.ಜಿ.ಎಚ್. ನಾಯಕ, ಮೀರಾ ನಾಯಕ್, ನಂದಾ ಹಳೆಮನೆ, ಮಾನಸ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಜಿ.ಪಿ. ಬಸವರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement