ವೃತ್ತಿಪರ ಕೋರ್ಸ್‌ಗೆ ಪ್ರವೇಶ ಆರಂಭ
ಮೈಸೂರು: ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕಂಪ್ಯೂಟರ್ ತಂತ್ರಾಂಶ ಅಭಿವೃದ್ಧಿ ಮತ್ತು ಆಹಾರ ಸಂಸ್ಕರಣ ವಿಷಯಗಳಲ್ಲಿ ವೃತ್ತಿಪರ ಪದವಿ ಕೋರ್ಸುಗಳಿಗೆ ಪ್ರವೇಶ ಆರಂಭಿಸಲಾಗಿದೆ. ಮೂರು ವರ್ಷಗಳ ಈ ವಿಶೇಷ ಕೋರ್ಸುಗಳಲ್ಲಿ ಕೈಗಾರಿಕೆಗಳೊಡನೆ ಚರ್ಚಿಸಿ ಅವರ ಅವಶ್ಯಕತೆಗಳನ್ನು ಅಳವಡಿಸಿಕೊಂಡು ಪ್ರಯೋಗಾಲಯ ಮತ್ತು ಕೈಗಾರಿಕೆಗಳಲ್ಲಿ ಪ್ರಾತ್ಯಕ್ಷಿಕೆಗಳಿಗೆ ಹೆಚ್ಚು ಒತ್ತು ನೀಡಿ ಪಠ್ಯಕ್ರಮ ರೂಪಿಸಲಾಗಿದೆ ಎಂದು ಪ್ರಾಂಶುಪಾಲ ಪ್ರೊ.ಎಂ.ಬಿ. ಮಲ್ಲಿಕಾರ್ಜುನ ಪಂಡಿತ್ ತಿಳಿಸಿದ್ದಾರೆ. ಈ ಸಂಬಂಧ ನಗರದಲ್ಲಿರುವ ಸಾಫ್ಟ್‌ವೇರ್ ಕಂಪನಿ, ಎಕ್ಸೆಲ್ ಸಾಫ್ಟ್, ಆಹಾರ ಸಂಸ್ಕರಣೆಯಲ್ಲಿ ಹೆಸರು ಮಾಡಿರುವ ಬಹುರಾಷ್ಟ್ರೀಯ ಕಂಪನಿಗಳಾದ ಹಿಂದೂಸ್ತಾನ ಯುನಿಲಿವರ್ ಲಿ. ನೆಸ್ಲೆ ಇಂಡಿಯಾ ಲಿ. ಕಂಪನಿಗಳಲ್ಲಿ ಶೈಕ್ಷಣಿಕ ಮತ್ತು ಕೌಶಲ ತರಬೇತಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮೊ. 96866 77240 ಸಂಪರ್ಕಿಸಬಹುದು.