ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಇತಿಹಾಸದಲ್ಲಿ ಡಾ.ಅಂಬೇಡ್ಕರ್ ದುರ್ಬಳಕೆ: ಡಾ.ಎಂ.ಆರ್.ರವಿ

Rashmi Kasaragodu
Updated On : 17 May 2014, 11:56 am

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಹಲವರು ವ್ಯಕ್ತಿಗತವಾಗಿ ಮಾತ್ರ ನೋಡುತ್ತಿದ್ದಾರೆ. ಅವರ ವ್ಯಕ್ತಿತ್ವದ ಬಗ್ಗೆಯೂ ತಿಳಿಯುವುದು ಮುಖ್ಯ ಎಂದು ಮೈಸೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಡಾ.ಎಂ.ಆರ್. ರವಿ ಹೇಳಿದರು. ಮಾನಸಗಂಗೋತ್ರಿಯಲ್ಲಿ ಮೈಸೂರು ವಿವಿ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಶನಿವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಅವರ ಬದುಕು ಆಶ್ಚರ್ಯದಿಂದ ಕೂಡಿದೆ. ಅಂಬೇಡ್ಕರ್ ಅವರನ್ನು ವ್ಯಕ್ತಿಯಾಗಿ ಮಾತ್ರ ನೋಡಲಾಗುತ್ತಿದೆ. ಅವರ ವ್ಯಕ್ತಿತ್ವದ ಬಗ್ಗೆಯೂ ತಿಳಿಯುವುದು ಅಗತ್ಯ. ವ್ಯಕ್ತಿ ಮತ್ತು ವ್ಯಕ್ತಿತ್ವಕ್ಕೆ ಬಹಳ ವ್ಯತ್ಯಾಸವಿದೆ. ಹೀಗಾಗಿ ನಮ್ಮ ವರ್ತನೆ ಬದಲಾಗಬೇಕಿದೆ ಎಂದರು.ಅಂಬೇಡ್ಕರ್ ಅವರನ್ನು ಮೀಸಲಾತಿಗಾಗಿ ಮಾತ್ರ ಸೀಮಿತಗೊಳಿಸಿರುವುದು ವಿಷಾದಕರ. ಮೀಸಲಾತಿ ಹೊರತಾಗಿಯೂ ಸಮಾಜ ಸುಧಾರಣೆಗಾಗಿ ಹಲವಾರು ಕೆಲಸ ಮಾಡಿದ್ದಾರೆ. ಅಂಬೇಡ್ಕರ್ ಅವರು ರಾಜಕೀಯ ಚಿಂತಕರು ಎಂಬುದನ್ನು ಒಪ್ಪಿಕೊಳ್ಳುವ ಮನಸ್ಥಿತಿ ಹಲವರಿಗೆ ಇಲ್ಲ. ಇತಿಹಾಸದಲ್ಲೂ ಅಂಬೇಡ್ಕರ್ ಅವರನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ವಿಷಾದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement