ಭಯೋತ್ಪಾದನಾ ವಿರೋಧಿ ದಿನಾಚರಣೆ
ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಭಯೋತ್ಪಾದನಾ ವಿರೋಧಿ ದಿನವನ್ನು ನಗರದಲ್ಲಿ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ ಭಯೋತ್ಪಾದನಾ ವಿರೋಧಿ ಪ್ರಮಾಣ ವಚನವನ್ನು ಬೋಧಿಸಿದರು. ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ಧತೆ ಕಾಯ್ದುಕೊಳ್ಳುತ್ತೇವೆ. ಪರಸ್ಪರ ಅರಿವು ಸಾಧಿಸುತ್ತೇವೆ. ಮಾನವ ಜೀವ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚಿತ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಪಣ ತೊಡಲಿದ್ದೇವೆ ಎಂಬ ಆಶಯವನ್ನು ಹೊತ್ತ ಪ್ರಮಾಣ ವಚನವನ್ನು ಜಿಲ್ಲಾಧಿಕಾರಿ ಎ.ಎಂ.ಕುಂಜಪ್ಪ ಬೋಧಿಸಿದರು.
ಅಹಿಂಸೆ ಹಾಗೂ ಸಹನೆಗೆ ಹೆಸರಾದ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಹಾಜರಿದ್ದ ಅಧಿಕಾರಿಗಳು, ಸಿಬ್ಬಂದಿ ಪ್ರತಿಜ್ಞಾ ಸ್ವೀಕರಿಸಿದರು.ಜಿಪಂ ಮುಖ್ಯ ನಿರ್ವಾಹಕ ಅಧಿಕಾರಿ ಕೆ.ಎಚ್. ನರಸಿಂಹಮೂರ್ತಿ, ಉಪ ವಿಭಾಗಾಧಿಕಾರಿ ಎಚ್.ಎಸ್. ಸತೀಶ್‌ಬಾಬು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.