ಪೊಲೀಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮೇ 22
ಪೊಲೀಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಆರಂಭಿಸುವ ಬಗ್ಗೆ ಗಂಭೀರವಾಗಿ ಚಿಂತಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಆರಂಭಿಸಲು ಮುಂದಿನ ಬಜೆಟ್ನಲ್ಲಿ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಪೊಲೀಸ್ ಆಸ್ಪತ್ರೆ ಮತ್ತು ಕಾಲೇಜು ಆರಂಭಿಸಲು ಗಂಭೀರವಾಗಿ ಪರಿಶೀಲಿಸುವುದಾಗಿ ಆಶ್ವಾಸನೆ ನೀಡಿದರು.
ಅಲ್ಲದೆ, ಮೈಸೂರು ಜಿಲ್ಲೆಗೆ 5, ನಗರಕ್ಕೆ 25 ಸೇರಿದಂತೆ ಒಟ್ಟು 30 ಗರುಡಾ ವಾಹನಗಳನ್ನು ಒದಗಿಸುವಾಗಿ ಮುಖ್ಯಮಂತ್ರಿ ಹೇಳಿದರು.
ಗೃಹ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ರಾಜ್ಯದಲ್ಲಿ 22 ಸಾವಿರ ಪೊಲೀಸರ ಕೊರತೆ ಇದೆ. ಇದನ್ನು ನೀಗಿಸಲು 8,500 ಪೊಲೀಸರು, 700 ಮಂದಿ ಎಸ್ಐ ನೇಮಕಾತಿಗೆ ಮುಖ್ಯಮಂತ್ರಿ ಅನುಮತಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದರು.
ಪೊಲೀಸ್ ನೇಮಕಾತಿಯಲ್ಲಿ ಮಹಿಳಾ ಮೀಸಲಾತಿಯನ್ನು ಶೇ.10 ರಿಂದ 20ಕ್ಕೆ ಹೆಚ್ಚಿಸಲಾಗಿದೆ. ಪೊಲೀಸರು, ಅವರ ಕುಟುಂಬಕ್ಕೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗಿದೆ ಎಂದರು.