ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮೋದಿ ಪ್ರಮಾಣ ವಚನ

Mainashree
Updated On : 23 May 2014, 11:16 am

ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮೇ 23
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ದಿನವನ್ನು ಸ್ಮರಣೀಯವಾಗಿಸುವ ಉದ್ದೇಶದಿಂದ ಪಾಸಿಟೀವ್ ಇಂಡಿಯಾ, ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಎನ್‌ಜಿ ಸ್ಟಾಫಿಂಗ್ ಸಂಸ್ಥೆ ಸಹಯೋಗದಲ್ಲಿ ಮೇ 26ರ ಮಧ್ಯಾಹ್ನ 3ಕ್ಕೆ ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ ದೇವಸ್ಥಾನದ ಬಳಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.
ಕೃಷ್ಣರಾಜ ಕ್ಷೇತ್ರ ಬಿಜೆಪಿ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎ. ರಾಮದಾಸ್ ನೇತೃತ್ವ ವಹಿಸಲಿದ್ದು, ಅಂದು ಜನಸಂಘದ ಹಿರಿಯ ಕಾರ್ಯಕರ್ತರಿಗೆ ಸನ್ಮಾನ, ಪಾಸಿಟಿವ್ ಇಂಡಿಯಾ ಅಡಿ ಸುಮಾರು 29 ಜಿಲ್ಲೆಯಿಂದ ಒಟ್ಟು 67 ಎಚ್‌ಐವಿ ಪೀಡಿತ ಮತ್ತು ಪೋಷಕರಿಲ್ಲದ ಮಕ್ಕಳನ್ನು ದತ್ತು ಸ್ವೀಕರಿಸಲಾಗುವುದು. ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣದ ಹಿನ್ನೆಲೆಯಲ್ಲಿ ಶಾಂತಿಯ ಧ್ಯೂತಕವಾಗಿ ಮಹಿಳೆಯರಿಂದ 67 ಪಾರಿವಾಳ ಹಾರಿ ಬಿಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸೋಮಸುಂದರ್  ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೃಹತ್ ಎಲ್‌ಇಡಿ ಪರದೆ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, ಬಳಿಕ ಸಂಜೆ 5.30ಕ್ಕೆ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ ವೀಕ್ಷಿಸಲು ಬೃಹತ್ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಸಾರ್ವಜನಿಕರಿಗೆ ಸಿಹಿ ವಿತರಿಸುವುದಾಗಿ ಅವರು ಹೇಳಿದರು.
ದೇಶಪ್ರೇಮಿಗಳಿಂದ ರಕ್ತದಾನ: ವಿದ್ಯಾರಣ್ಯ ಆಸ್ಪತ್ರೆಯ ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಡಾ. ಮಂಜುನಾಥ್ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ 67 ಮಂದಿ ದೇಶಪ್ರೇಮಿಗಳಿಂದ ರಕ್ತದಾನ ಮಾಡುವುದರ ಮೂಲಕ ದೇಶಕ್ಕಾಗಿ ಬದುಕೋಣ ಎಂಬ ಸಂದೇಶ ಸಾರುವ ಕಾರ್ಯಕ್ರಮ ಆಯೋಜಿಸಿದ್ದು, ರಕ್ತದಾನಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದರು.
ಎನ್.ಜಿ. ಸಾಫ್ಟಿಂಗ್‌ನ ವರುಣ್ ಮಾತನಾಡಿ, 67 ಮಂದಿ ನಿರುದ್ಯೋಗ ಯುವಕ, ಯುವತಿಯರಿಗೆ ಎನ್.ಜಿ. ಸ್ಟಾಫಿಂಗ್ ವತಿಯಿಂದ ವಿವಿಧ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿ ಪತ್ರ ನೀಡುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕೆ.ಆರ್. ಕ್ಷೇತ್ರ ಬಿಜೆಪಿ ಅಧ್ಯಕ್ಷ ಆರ್. ರಾಮಪ್ರಸಾದ್, ಸ್ಟಾಫಿಂಗ್ ಸಂಸ್ಥೆಯ ಗುರುರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement