ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

'ಒಗ್ಗೂಡಬೇಕಿದ್ದ ಮನಸ್ಸು ಒಡೆಯುತ್ತಿವೆ'

Mainashree
Updated On : 24 May 2014, 9:20 am

ಮೈಸೂರು: ವಿದ್ಯಾವಂತರ ಸಂಖ್ಯೆ ಹೆಚ್ಚಾದಂತೆ ನಮ್ಮ ಮನಸ್ಸುಗಳು ದಿನೆ ದಿನೆ ಒಡೆಯುತ್ತಿವೆಯೆ ಹೊರತು ಒಗ್ಗೂಡುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್ ವಿಷಾದಿಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ, ರಾಜ್ಯ ದಲಿತ ಮಹಿಳಾ ಒಕ್ಕೂಟ ಜಿಲ್ಲಾ ಸಮಿತಿಯು ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು, ಡಾ.ಕೆ.ಪಿ. ಮಹಾಲಿಂಗು ಕಲ್ಕುಂದ ಅವರ ಡಾ.ಬಿ.ಆರ್. ಅಂಬೇಡ್ಕರ್ ಹೆಜ್ಜೆಗಳು... ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.
ಇಂದಿನ ಸಮಾಜದಲ್ಲಿ ಅವಿದ್ಯಾವಂತರಿಗಿಂತ ವಿದ್ಯಾವಂತರದಲ್ಲಿ ಜಾತಿಯ ಮನಸ್ಸು ಹೆಚ್ಚಾಗುತ್ತಿದೆ. ಇದು ನಮ್ಮ ಮನಸ್ಸುಗಳು ದಿನೆ ದಿನೆ ಒಡೆಯಲು ಕಾರಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಮಾನತೆಯ ಮಟ್ಟ ತಲುಪಲು ಸಾಧ್ಯವಿಲ್ಲದ ಮನಸ್ಥಿತಿಯಲ್ಲಿ ನಾವಿದ್ದೇವೆ. ಹೆಚ್ಚು ಹೆಚ್ಚು ಶಿಕ್ಷಿತರಾದಂತೆ ಜಾತಿಯ ಮನಸ್ಸು ಹೆಚ್ಚುತ್ತಿದೆ. ಅನಕ್ಷರಸ್ಥರಿಗಿಂತ ಶಿಕ್ಷಿತರಲ್ಲಿ ಇಂತಹ ಮನಸ್ಸು ಇರುವುದು ಅಪಾಯಕಾರಿ ಎಂದರು.
ದೇವಸ್ಥಾನಗಳಲ್ಲಿನ ಶ್ರೇಣಿಕೃತ ವ್ಯವಸ್ಥೆಗೆ ಪ್ರಜ್ಞಾ ಪೂರ್ವಕವಾಗಿ ನಾವು ಉತ್ತೇಜನ ನೀಡುತ್ತಿದ್ದೇವೆ. ಒಬ್ಬ ಮನುಷ್ಯನಿಗೆ ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟು ಗೌರವ ಕೊಡುವುದನ್ನು ಕಲಿಯಬೇಕು. ದಲಿತ ಸಂಘಟನೆಗಳು, ರೈತ ಸಂಘಟನೆ, ಕಾರ್ಮಿಕ ಸಂಘಟನೆಗಳು 70ರ ದಶಕದಲ್ಲಿದ್ದಷ್ಟು ಪರಿಣಾಮಕಾರಿಯಾಗಿ ಇಲ್ಲ. ಆದ್ದರಿಂದ ನಾವು ನಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ಅವರು ಹೇಳಿದರು.
ಮಾನಸ ಗಂಗೋತ್ರಿಯ ರಾಣಿಬಹದ್ದೂರ್ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಿ. ಆನಂದ್ ಪುಸ್ತಕ ಕುರಿತು ಮಾತನಾಡಿದರು. ದಸಂಸ ಮುಖಂಡರಾದ ಹರಿಹರ ಆನಂದಸ್ವಾಮಿ, ಮಲ್ಲೇಶ್ ಚುಂಚನಹಳ್ಳಿ, ಶ್ರೀನಿವಾಸ ಬಂಬೂಬಜಾರ್, ರಾಜಣ್ಣ ಹಿಟ್ನಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement