ಖಾತ್ರಿ ಪರಿಣಾಮಕಾರಿಯಾಗಿ ಜಾರಿ ಮಾಡಿ
ರಾವಂದೂರು: ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ. ವೆಂಕಟೇಶ್ ಹೇಳಿದರು. ರಾವಂದೂರು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ರು. 38 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ರೈತ ಸಂಪರ್ಕ ಕೇಂದ್ರದ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಲವಾರು ಯೋಜನೆಗಳಿದ್ದು, ಗ್ರಾಪಂ ಮಟ್ಟದಲ್ಲಿಯೇ ಈ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಲು ಸಾಧ್ಯವಿದ್ದು, ಇದರಿಂದ ಜನರ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂದು ತಿಳಿಸಿದರು. ಯಾವುದೇ ಯೋಜನೆಗಳು ಕಾರ್ಯಗತವಾಗಲು ಜನರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಸರ್ಕಾರದೊಂದಿಗೆ ಜನರೂ ಕೈ ಜೋಡಿಸಿದರೆ ಯೋಜನೆಗಳು ಪರಿಣಾಮಕಾರಿಯಾಗಿ ಕಾರ್ಯಗತವಾಗುತ್ತದೆ ಎಂದು ತಿಳಿಸಿದರು.
ಜಿಪಂ ಸದಸ್ಯ ಎಸ್.ಎ. ಶಿವಣ್ಣ, ಗ್ರಾಪಂ ಅಧ್ಯಕ್ಷ ಸ್ವಾಮಿಗೌಡ, ತಾಪಂ ಉಪಾಧ್ಯಕ್ಷ ರಘುನಾಥ್, ಸದಸ್ಯ ಚಂದ್ರು, ಎಪಿಎಂಸಿ ಅಧ್ಯಕ್ಷ ಹೊಲದಪ್ಪ, ತಾ. ಬಿಜೆಪಿ ಅಧ್ಯಕ್ಷ ಆರ್.ಟಿ. ಸತೀಶ್, ತಹಸೀಲ್ದಾರ್ ಮೋಹನ್, ಇಒ ಮಹದೇವಸ್ವಾಮಿ, ಪಿಡಿಒ ಬಸವರಾಜು, ರಾಮಲಿಂಗು, ಎ.ಡಿ. ರಾಜು, ಸಿ.ಸಿ. ಮನೋಹರ್, ಪ್ರಕಾಶ್, ಜೆ.ಇ. ದಿನೇಶ್, ಸಿಡಿಪಿಒ ದೇವ್‌ಕುಮಾರ್, ಆರ್.ಐ. ಪುಟ್ಟಶೆಟ್ಟಿ ಇದ್ದರು.