ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನೀರಿನ ಕರ ವಸೂಲಿ ವಿಫಲ

Mainashree
Updated On : 26 May 2014, 9:45 am

ಮೈಸೂರು: ಜಸ್ಕೋ ಸಂಸ್ಥೆಯ ಬೇಜವಾಬ್ದಾರಿಯಿಂದ ನೀರಿನ ಬಿಲ್ ವಿತರಿಸಲಾಗದೆ ಕರ ವಸೂಲಾತಿ ಸಾಧ್ಯವಾಗಿಲ್ಲ ಎಂದು ವಾಣಿವಿಲಾಸ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ತಿಳಿಸಿದರು. ನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ಸೋಮವಾರ ನಡೆದ ತೆರಿಗೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಆಯೋಜಿಸಿದ್ದ ಸಭೆಯಲ್ಲಿ ಈ ವಿಷಯ ತಿಳಿಸಿದರು.
ನೀರಿನ ನಿರ್ವಹಣೆಯ ಹೊಣೆ ಹೊತ್ತ ಜಸ್ಕೋ ಸಂಸ್ಥೆಯ ಬೇಜವಾಬ್ದಾರಿಯಿಂದ ಬಿಲ್ ವಿತರಣೆ ಸರಿಯಾಗಿ ಆಗಿಲ್ಲ ಎಂದು ಹೇಳಿದರು. ಕೆಲವರು ಮಾತ್ರ ನೀರಿನ ಕರ ಪಾವತಿಸುತ್ತಿದ್ದಾರೆ. ಆದರೆ ಲಕ್ಷಾಂತರ ರು. ತೆರಿಗೆ ಉಳಿಸಿಕೊಂಡವರು ಇಂದಿಗೂ ಪುಕ್ಕಟ್ಟೆಯಾಗಿ ನೀರು ಬಳಸುತ್ತಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಬಿ.ಎಲ್. ಭೈರಪ್ಪ  ಆಕ್ರೋಶ ವ್ಯಕ್ತಪಡಿಸಿದರು.
ಜಸ್ಕೋ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸಿದೆ. ಆದರೆ ನೀವು ಪಾಲಿಕೆ ಅಧೀನದಲ್ಲಿ ಕೆಲಸ ಮಾಡುತ್ತಿದ್ದೀರಿ ಎಂಬುದನ್ನು ಮರೆಯಬಾರದು. ತೆಗೆದುಕೊಳ್ಳುವ ಸಂಬಳಕ್ಕೆ ಸರಿಯಾಗಿ ಕೆಲಸ ಮಾಡಿ. ಮತ್ತೊಬ್ಬರ ಮೇಲೆ ಆರೋಪ ಮಾಡುವ ನಿಮಗೆ ನಾಚಿಕೆ ಆಗಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement