ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಶಾಲಾ ದಾಖಲು ಆಂದೋಲನ

Mainashree
Updated On : 27 May 2014, 11:06 am

ಮೈಸೂರು: ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಅರಿವು ಮೂಡಿಸಲು ಆಯೋಜಿಸಿದ್ದ ಶಾಲಾ ದಾಖಲಾತಿ ಆಂದೋಲನಕ್ಕೆ ಕೃಷ್ಣರಾಜ ಶಾಸಕ ಎಂ.ಕೆ. ಸೋಮಶೇಖರ್ ಸೋಮವಾರ ಚಾಲನೆ ನೀಡಿದರು.
ಕನಕಗಿರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಂಭಾಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಾಥಾ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಲ್ಲಿ ಮುಂದಾಗಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಗುಣ ಮಟ್ಟದ ಶಿಕ್ಷಣ ನೀಡುವಲ್ಲಿ ಹೆಚ್ಚಿನ ಗಮನ ಹರಿಸಬೇಕು. ಹಾಗೂ ಈ ಬಾರಿಯ ಎಸ್ಸೆಸ್ಸೆಲ್ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಿ ಅವರಿಗೆ ಪೂರಕ ಪರೀಕ್ಷೆಗೆ ತಯಾರು ಮಾಡುವಲ್ಲಿ ಶಿಕ್ಷಕರು ಮುತುವರ್ಜಿ ವಹಿಸಬೇಕು ಎಂದು ಅವರು ತಿಳಿಸಿದರು.  
ನಂತರ ಕನಕಗಿರಿಯ ಮನೆ ಮನೆಗೆ ತೆರಳಿದ ಸೋಮಶೇಖರ್ ಅವರು ಮಕ್ಕಳ ಶಾಲಾ ದಾಖಲಾತಿ ಬಗ್ಗೆ ಮಾಹಿತಿ ಪಡೆದರು. ಅಲ್ಲದೆ ಸರ್ಕಾರಿ ಶಾಲೆಗೆ ಸೇರಿಸುವಂತೆ ಮನವಿ ಮಾಡಿದರು. ಬಿಇಒ ಶಿವರಾಮೇಗೌಡ, ಮುಖ್ಯೋಪಧ್ಯಾಯ ಸೋಮೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement