ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಒಕ್ಕಲಿಗರ ಸಂಘದ ನಿರ್ದೇಶಕ ಪ್ರಸನ್ನಗೆ ಸನ್ಮಾನ

Srinivasa Murthy VN
Updated On : 28 May 2014, 10:48 am

ಕೆ.ಆರ್. ನಗರ: ಜನಸಾಮಾನ್ಯರಲ್ಲಿ ಕೆರೆ-ಕಟ್ಟೆಗಳ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಿ, ಅವುಗಳನ್ನು ಅಭಿವೃದ್ಧಿಪಡಿಸುವಂತೆ ಸರ್ಕಾರ ಮತ್ತು ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರಲು ಜನಚೇತನ ಸಂಸ್ಥೆ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎನ್.ಪ್ರಸನ್ನ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಸ್ಥೆ ವತಿಯಿಂದ ನಡೆದ ಪ್ರಗತಿ ಪರ ರೈತರ ಸಭೆಯಲ್ಲಿ ಮಾತನಾಡಿದ ಅವರು, ತಾವು ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ನಂತರ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ರೈತರಲ್ಲಿ ಕೆರೆ-ಕಟ್ಟೆ ಮತ್ತು ಮಳೆ ನೀರು ಸಂರಕ್ಷಣೆ ಕುರಿತಂತೆ ಅರಿವು ಮೂಡಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಸಿ ಅರಿವು ಮೂಡಿಸಿದ್ದು, ಮೇ 31 ರಂದು ಮಂಡ್ಯ ಜಿಲ್ಲೆಯ ಸೀಹಳ್ಳಿ ದೇವಾಲಯದಿಂದ ಪಾದಯಾತ್ರೆ ಆರಂಭವಾಗಲಿದ್ದು, ಜೂ.1ರ ಸಂಜೆ 4ಕ್ಕೆ ಮೈಸೂರಿನ ನಂಜರಾಜ ಬಹದ್ದೂರ್ ಕಲ್ಯಾಣ ಮಂಟಪದಲ್ಲಿ  ಪ್ರತಿಜ್ಞಾ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಅಂದಿನ ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ಪರಿಸರ ತಜ್ಞ ಡಾ. ಯಲ್ಲಪ್ಪರೆಡ್ಡಿ, ಸಾಹಿತಿ ಬಿ.ಟಿ.ಲಲಿತಾನಾಯಕ್, ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ರೈತ ಹೋರಾಟಗಾರ್ತಿ ಸುನಂದ ಜಯರಾಂ, ಪರಿಸರ ಹೋರಾಟಗಾರ ರಾಜೇಂದ್ರಸಿಂಗ್, ಚಿಂತಕ ಡಾ.ಎಸ್. ತುಕಾರಾಂ ಪಾಲ್ಗೊಳ್ಳಲಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement