ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ದೇಶದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯಲು ಬ್ರಿಟಿಷರೇ ಕಾರಣ

Srinivasa Murthy VN
Updated On : 1 Jun 2014, 12:05 pm

ಮೈಸೂರು: ದೇಶದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯಲು ಬ್ರಿಟಿಷರು ಕಾರಣ ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್ ತಿಳಿಸಿದರು.
ಸಂವಹನ ಪ್ರಕಾಶನವು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಡಾ.ಎಂ.ಆರ್. ರವಿ ಅವರ ಈ ಜೀವನ ನಿಮ್ಮದು, ಆಧುನಿಕ ಶಿಕ್ಷಣ ಮತ್ತು ಸಾಮಾಜಿಕ ಬದಲಾವಣೆ, ಮಾಡರ್ನ್ ಎಜುಕೇಷನ್ ಆ್ಯಂಡ್ ಸೋಷಿಯಲ್ ಚೇಂಜ್ ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಈ ಹಿಂದೆ ದೇಶದಲ್ಲಿ ಗುರುಕುಲ ಪದ್ಧತಿ ಇತ್ತು. ಆಗ ಎಲ್ಲರಿಗೂ ಶಿಕ್ಷಣ ಸಿಗುತ್ತಿರಲಿಲ್ಲ. ಆದರೆ ಭಾರತವನ್ನು ಆಳಿದ ಬ್ರಿಟಿಷರು ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಿದರು ಎಂದು ಹೇಳಿದರು.
ಮೈಸೂರಿನ ಮಹಾರಾಜರು ತುಳಿತಕ್ಕೆ ಒಳಗಾದ ವರ್ಗಗಳಿಗೆ ವಸತಿ ನಿಲಯ ಸ್ಥಾಪಿಸುವ ಮೂಲಕ ಸಾಕಷ್ಟು ಕೊಡುಗೆ ನೀಡಿದರು. ಅವರು ಶಿಕ್ಷಣಕ್ಕೂ ಸಾಕಷ್ಟು ಆದ್ಯತೆ ನೀಡಿದರು. ಡಾ.ಅಂಬೇಡ್ಕರ್ ಅವರು ಅಸ್ಪೃಶ್ಯತೆ ಹೆಚ್ಚಿದ ಸಮಯದಲ್ಲಿ ವಿದ್ಯಾಭ್ಯಾಸ ಮಾಡಿದರು. ಅವರು ಸಮಾಜದಲ್ಲಿ ಆಸ್ತಿಯಲ್ಲಿ ಸಮಾನತೆ ಹೊಂದಲು ಸಾಧ್ಯವಿಲ್ಲ. ಆದರೆ ಶಿಕ್ಷಣ ಪಡೆಯುವ ಮೂಲಕ ಸರಿಸಮಾನವಾಗಿ ಬೆಳೆಯಲು ಸಾಧ್ಯ ಎಂದು ಹೇಳಿದ್ದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ಮುರುಘ ಮಠದ ಡಾ.ಶಿವಮೂರ್ತಿ ಮುರುಘ ಶರಣರು, ಇತಿಹಾಸಕಾರ ಪ್ರೊ.ಎ.ವಿ.ನರಸಿಂಹ ಮೂರ್ತಿ, ವಿಶ್ರಾಂತ ಕುಲಪತಿ ಪ್ರೊ.ಷೇಕ್ ಅಲಿ, ಲೇಖಕ ಡಾ.ಎಂ.ಆರ್.ರವಿ, ಪತ್ರಿಕೋದ್ಯಮಿ ಕೆ.ಬಿ.ಗಣಪತಿ, ಪ್ರಕಾಶಕ ಡಿ.ಎನ್. ಲೋಕಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement