ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಸ್ಸೆಸ್ಸೆಲ್ಸಿ ಪರೀಕ್ಷೆ: 2 ಡಿಬಾರ್, ನಕಲು ಹಾವಳಿ

Lingaraj Badiger
Updated On : 2 Apr 2013, 11:23 am

ಕನ್ನಡಪ್ರಭ ವಾರ್ತೆ, ರಾಯಚೂರು, ಏ.1
ಜಿಲ್ಲೆಯಲ್ಲಿ ಸೋಮವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಪರೀಕ್ಷೆಯ ಮೊದಲ ದಿನ ನಕಲು ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಪರೀಕ್ಷೆಗೆ ಒಟ್ಟು 832 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು ಕಂಡುಬಂದಿತು.
ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಉರ್ದು, ಹಿಂದಿ ವಿಷಯಗಳ ಪರೀಕ್ಷೆ ಸೋಮವಾರ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 21,027 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಆದರೆ ಪರೀಕ್ಷೆಗೆ 20,195 ವಿದ್ಯಾರ್ಥಿಗಳು ಹಾಜರಾದರು. ನಗರದ ಕೆಇಬಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಡಿಡಿಪಿಐ ಪರಮೇಶ್ ಅವರು ಅವರನ್ನು ಡಿಬಾರ್ ಮಾಡಿದರು.
ಪೈಪೋಟಿ: ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಹಿನ್ನೆಲೆ ಪರೀಕ್ಷೆ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿತ್ತು. ಹಾಗೆಯೇ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪರೀಕ್ಷೆ ಕೇಂದ್ರಗಳ ಸುತ್ತಲಿನ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಬಹುತೇಕ ಕಡೆ ತೆರೆದಿದ್ದವು.
ಅದೇ ರೀತಿ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳಿಗೆ ನಕಲು ಪೂರೈಸುವ ಯುವಕರ ದಂಡು ಬಹುತೇಕ ಪರೀಕ್ಷೆ ಕೇಂದ್ರಗಳ ಬಳಿ ಜಮಾಯಿಸಿದ್ದು ಕಂಡುಬಂದಿತು. ಯುವಕರು ನಕಲು ಚೀಟಿ ನೀಡಲು ಪರೀಕ್ಷೆ ಕೇಂದ್ರಗಳ ಸುತ್ತಲಿನ ಪ್ರದೇಶದ ಮನೆ, ಕಚೇರಿಗಳೆನ್ನದೇ ಶಾಲೆಗಳ ಆವರಣ ಗೋಡೆಗಳ ಮೇಲೆ ಕುಳಿತೂ ಚೀಟಿ ಎಸೆಯುತ್ತಿದ್ದ ದೃಶ್ಯ ಕಂಡುಬಂದಿತು. ಅನೇಕ ಕಡೆ ಯುವಕರ ಈ ರೀತಿಯ ವರ್ತನೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅಡಚಣೆಯುಂಟು ಮಾಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement