ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಸ್ಸೆಸ್ಸೆಲ್ಸಿ; 3816 ಮಕ್ಕಳು ಹಾಜರು

Lingaraj Badiger
Updated On : 3 Apr 2013, 11:29 am

ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಏ.2
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಸೋಮವಾರ ಪಟ್ಟಣ ಸೇರಿದಂತೆ ವಿವಿಧೆಡೆ ವ್ಯವಸ್ಥೆ ಕಲ್ಲಿಸಿದ ಪರೀಕ್ಷಾ ಕೇಂದ್ರಗಳಲ್ಲಿ 3,816 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ತಾಲೂಕಿನ 73 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಲಿಂಗಸ್ಗೂರು, ಹಟ್ಟಿ, ಸಜ್ಜಲಗುಡ್ಡ, ಖೈರವಾಡಗಿ, ಮುದಗಲ್, ಮಸ್ಕಿ ರೋಡಲಬಂಡ (ಯುಕೆಪಿ) ಸೇರಿದಂತೆ 12 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಕಲ್ಪಿಸಲಾಗಿತ್ತು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 2,122 ಗಂಡು, 1,808 ಹೆಣ್ಣು ಸೇರಿದಂತೆ ಒಟ್ಟು 3,940 ವಿದ್ಯಾರ್ಥಿಗಳ ನೊಂದಣಿಯಲ್ಲಿ 3,816 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 60 ಗಂಡು, 64 ಹೆಣ್ಣು ಸೇರಿದಂತೆ 124 ಮಕ್ಕಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement