ಲಾರಿ ಡಿಕ್ಕಿ: ಬೈಕ್ ಸವಾರ ಸಾವು
ರಾಯಚೂರು: ಸಿಂಧನೂರು ತಾಲೂಕಿನ ರಂಗಾಪುರ ಕ್ಯಾಂಪಿನ ಬಳಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾನೆ. ಮೃತನನ್ನು ಅಮರೇಶ್ ಎಂದು ಗುರುತಿಸಲಾಗಿದೆ. ಈತ ಬೈಕ್ ಮೇಲೆ ತೆರಳುತ್ತಿದ್ದಾಗ ವೇಗವಾಗಿ ಬಂದ ಲಾರಿಯು ಡಿಕ್ಕಿ ಹೊಡೆದಿದ್ದರಿಂದ ಈತ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತುರ್ವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್‌ನಿಂದ ಬಿದ್ದು ಸಾವು
ರಾಯಚೂರು: ಮಾನವಿ ತಾಲೂಕಿನ ಕವಿತಾಳ ಗ್ರಾಮದ ಬಳಿ ಬೈಕ್‌ನಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತನನ್ನು ಶೇಖರಯ್ಯಸ್ವಾಮಿ ಎಂದು ಗುರುತಿಸಲಾಗಿದೆ. ಈತ ಬೈಕ್‌ನ ಹಿಂಬದಿ ಸೀಟಿನಲ್ಲಿ ಕುಳಿತು ಸಾಗುತ್ತಿದ್ದಾಗ ಬೈಕ್ ಚಾಲಕ ನಿರ್ಲಕ್ಷ್ಯದಿಂದ ಓಡಿಸಿದ್ದು ಆಯತಪ್ಪಿ ಕೆಳಗೆ ಬಿದ್ದ ಈತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.