ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಆರ್‌ಟಿಇ: ಪ್ರವೇಶ ಪ್ರಕ್ರಿಯೆಗೆ ಗಡುವು

Lingaraj Badiger
Updated On : 4 Apr 2013, 11:15 am

ರಾಯಚುರು: 2013- 14ನೇ ಸಾಲಿಗೆ ಕಡ್ಡಾಯ ಶಿಕ್ಷಣ ಕಾಯಿದೆ ಅಡಿ ಪ್ರವೇಶ ಪ್ರಕ್ರಿಯೆಯನ್ನು ಲಾಟರಿ ಮೂಲಕ ನಡೆಸಲಾಗುವುದು ಎಂದು ಬಿಇಒ ಕಚೇರಿ ತಿಳಿಸಿದೆ. ಈ ಪ್ರಕ್ರಿಯೆ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳು ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಲು ಏ. 12 ಕಡೆಯ ದಿನವಾಗಿದೆ. ಕಾಯ್ದಿರಿಸಿದ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯಲು ಏ.17 ಕಡೆಯ ದಿನ. ನಂತರದಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ತಿಳಿಸಿದೆ.
ಬದಲಾವಣೆಗೆ ಶಿಕ್ಷಣ: ಮೂರ್ತಿ
ಸಿಂಧನೂರು: ಶಿಕ್ಷಣ ಕ್ಷೇತ್ರದಲ್ಲಿ ಉನ್ನತಿ ಸಾಧಿಸುವ ಮೂಲಕ ಸಾಮಾಜಿಕ ಬದಲಾವಣೆಗೆ ಕೊಡುಗೆ ನೀಡುವಂತೆ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಉಪಾಧ್ಯಕ್ಷ ಡಿ. ರಾಮಕೃಷ ್ಣಮೂರ್ತಿ ಕರೆ ನೀಡಿದರು. ಅವರು ನಗರದ ದುದ್ದುಪುಡಿ ಮಹಿಳಾ ಮಹಾವಿದ್ಯಾಲಯದಲ್ಲಿ ಪಿಯುಸಿ ದ್ವಿತೀಯ ಹಾಗೂ ಪದವಿ ಅಂತಿಮ  ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ನಾಲ್ಕನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಎನ್‌ಎಸ್‌ಎಸ್ ಅಧಿಕಾರಿ ಶಿವರಾಜ, ವೆಂಕಟರೆಡ್ಡಿ ಮಾತನಾಡಿದರು. ಸಂಸ್ಥೆ ಕಾರ್ಯದರ್ಶಿ ಆರ್.ಸಿ. ಪಾಟೀಲ್ ಕಾಲೇಜು ವಾರ್ಷಿಕ ವರದಿ ವಾಚಿಸಿದರು. ಶರಣಬಸವ, ಮಲ್ಲೇಶ ಬಿ.ಹಳ್ಳಿ, ಮಹೇಶ.ಕೆ, ಸುಶೀಲಾ, ಉಷಾರಾಣಿ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಲಕ್ಷ್ಮೀ ಜವಳಗೇರಾ ಅನಿಸಿಕೆ ವ್ಯಕ್ತಪಡಿಸಿದರು. ರಾಧಾ ಸಂಗಡಿಗರು ಪ್ರಾರ್ಥಿಸಿದರು. ರೇಖಾ ಗೊರೇಬಾಳ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement