ಇಂದು ರಾಜ್ಯ ಮಟ್ಟದ ವಿಚಾರ ಸಂಕಿರಣ
ಗುಲ್ಬರ್ಗ: ಗುಲ್ಬರ್ಗ ವಿಶ್ವವಿದ್ಯಾಲಯವು ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಏ.4ರಂದು ಬೆ.11 ಗಂಟೆಗೆ ಶರಣ ಹಡಪದ ಅಪ್ಪಣ್ಣ ಅಧ್ಯಯನ ಪೀಠ, ಹಡಪದ ಶರಣರು- ಶರಣಿಯರ ಇತಿವೃತ್ತ ಹಾಗೂ ಅವರ ಸಾಹಿತ್ಯ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಆಯೋಜಿಸಿದೆ.
ಈ ವಿಚಾರ ಸಂಕಿರಣದಲ್ಲಿ ಎರಡು ಗೋಷ್ಠಿಗಳನ್ನು ಆಯೋಜಿಸಲಾಗಿದೆ. ಮೊದಲ ಗೋಷ್ಠಿಯ ಅಧ್ಯಕ್ಷತೆಯನ್ನು ಡಾ. ಬಸವರಾಜ ಸಬರದ ಮತ್ತು 2ನೇ ಗೋಷ್ಠಿಯ ಅಧ್ಯಕ್ಷತೆಯನ್ನು ಡಾ. ಎಸ್.ಎಂ. ಹಿರೇಮಠ ವಹಿಸುವರು. ನಂತರ ಗುಲ್ಬರ್ಗದ ಎಂ.ವೈ. ಸುರಪುರ ಹಾಗೂ ಸಂಗಡಿಗರಿಂದ ವಚನ ಸಂಗೀತ ಕಾರ್ಯಕ್ರಮ ಜರುಗಲಿದೆ.