ಇಂದು ಬಾಬೂಜೀ ಜಯಂತಿ ಉತ್ಸವ
ರಾಯಚೂರು: ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏ.5ರಂದು ಡಾ. ಬಾಬು ಜಗಜೀವನರಾಂ ಅವರ 106ನೇ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 10ಕ್ಕೆ ನಗರದ ರಂಗಮಂದಿರದಲ್ಲಿ ಜಯಂತಿ ಉತ್ಸವವನ್ನು ಜಿಲ್ಲಾಧಿಕಾರಿ ಉಜ್ವಲ್ಕುಮಾರ್ ಘೋಷ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಪಂ ಸಿಇಒ ಜ್ಞಾನಪ್ರಕಾಶ್ ವಹಿಸುವರು. ಎಸ್ಪಿ ಎಸ್.ಬಿ. ಬಿಸನಳ್ಳಿ, ಸಹಾಯಕ ಆಯುಕ್ತೆ ಮಂಜುಶ್ರೀ, ಹೆಚ್ಚುವರಿ ಡಿಸಿ ಎಂ. ತಿಮ್ಮಪ್ಪ, ಜಿಪಂ ಯೋಜನಾಧಿಕಾರಿ ಡಾ. ಟಿ. ರೋಣಿ, ನಗರಸಭೆಯ ಪೌರಾಯುಕ್ತ ಮಂಜುನಾಥ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿರಸಗಿಕರ್ ನಾಗಣ್ಣ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದೆ.
ರೇಲ್ವೆ ಸ್ಟೇಷನ್ ವೃತ್ತದಲ್ಲಿ: ಡಾ. ಜಗಜೀವನ ರಾಂ ಅವರ ಜಯಂತಿ ಸಂದರ್ಭ ಏ. 5ರಂದು ನಗರದ ರೇಲ್ವೆ ಸ್ಟೇಷನ್ ವೃತ್ತದಲ್ಲಿ ಅವರ ಪುತ್ಥಳಿಗೆ ಗೌರವ ಸಲ್ಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9ಕ್ಕೆ ಪುತ್ಥಳಿಗೆ ಎಲ್ಲ ಅಧಿಕಾರಿಗಳು ಗೌರವ ಸಲ್ಲಿಸಿದ ನಂತರದಲ್ಲಿ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣಾಧಿಕಾರಿ ಎಸ್. ನಾಗಣ್ಣ ತಿಳಿಸಿದ್ದಾರೆ.
ಮಮತಾ ನೇಮಕ
ಸಿಂಧನೂರು: ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಪ್ರಭಾರಿಯಾಗಿ ಮಮತಾ ಹಿರೇಮಠ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ ಆದೇಶ ಹೊರಟಿಸಿದ್ದಾರೆ. ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಿಳೆಯರನ್ನು ಸಂಘಟಿಸುವ ಮೂಲಕ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಅವರು ಸೂಚಿಸಿದ್ದಾರೆ.