ಉಲ್ಲಂಘನೆ; ಇಬ್ಬರು ಶಾಸಕರಿಗೆ ನೋಟಿಸ್
ರಾಯಚೂರು: ನೀತಿ ಸಂಹಿತೆಯ ಉಲ್ಲಂಘನೆಯ ಆರೋಪದ ಹಿನ್ನೆಲೆ ದೇವದುರ್ಗ ಶಾಸಕ ಶಿವನಗೌಡ ನಾಯಕ ಹಾಗೂ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ಅವರಿಗೆ ಜಿಲ್ಲಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ದೇವದುರ್ಗದಲ್ಲಿ ಶಾಸಕ ಶಿವನಗೌಡ ನಾಯಕ ಪರವಾನಗಿಯಿಲ್ಲದೇ ಬಿಜೆಪಿ ಕಚೇರಿ ಆರಂಭಿಸಿದ ಬಗ್ಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ನೋಟಿಸ್ ಜಾರಿ ಮಾಡಲಾಗಿದೆ. ಅದೇ ರೀತಿ ಪ್ರತಾಪಗೌಡ ಪಾಟೀಲ್ ಅವರು ಬೆಂಬಲಿಗರಿಗೆ, ಕಾರ್ಯಕರ್ತರಿಗೆ ಭೋಜನದ ವ್ಯವಸ್ಥೆ ಮಾಡಿ ಸಂಹಿತೆ ಉಲ್ಲಂಘಿಸಿದ ಕಾರಣ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.