ನಾಳೆ ನ್ಯಾಯಾಲಯ ಕಟ್ಟಡ ಉದ್ಘಾಟನೆ
ಲಿಂಗಸ್ಗೂರು: ಸ್ಥಳೀಯ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಜರುಗಲಿದೆ ಎಂದು ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಮುದುಕಪ್ಪ ವಕೀಲರು ಹಾಗೂ ಕಾರ್ಯದರ್ಶಿ ಜಂಬಣ್ಣ ಮಂಚಾಲಿ ವಕೀಲರು ತಿಳಿಸಿದ್ದಾರೆ. ನ್ಯಾಯಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಯಚೂರು ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಬಿ.ಶ್ರೀನಿವಾಸಗೌಡ ಹಾಗೂ ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎಚ್. ಮಿಟ್ಟಲಕೋಡ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.