ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು
ರಾಯಚೂರು: ದೇವದುರ್ಗ ನಗರದಲ್ಲಿ ಪರವಾನಗಿಯಿಲ್ಲದೇ ಬಿಜೆಪಿ ಪಕ್ಷದ ಕಚೇರಿ ತೆರೆದ ಪಕ್ಷದ ತಾಲೂಕು ಅಧ್ಯಕ್ಷ ಸಿ.ಎಸ್.ಪಾಟೀಲ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ದೇವದುರ್ಗ ಪುರಸಭೆಯ ಮುಖ್ಯಾಧಿಕಾರಿ ಶ್ರೀಪಾದ ಭಟ್ ಅವರು ನೀಡಿದ ದೂರಿನ ಮೇರೆಗೆ ಪಟ್ಟಣದ ವಾರ್ಡ್ ಸಂಖ್ಯೆ 3ರಲ್ಲಿ ವೆಂಕಟೇಶ ಪೂಜಾರಿ ಎಂಬುವವರಿಗೆ ಸೇರಿದ ಸ್ಥಳದಲ್ಲಿ ಬಿಜೆಪಿ ತಾಲ್ಲೂಕಾಧ್ಯಕ್ಷ ಸಿ.ಎಸ್. ಪಾಟೀಲ್ ಯಾವುದೇ ಅಧಿಕೃತ ಪರವಾನಗಿ ಪಡೆಯದೇ ಬಿಜೆಪಿ ಕಚೇರಿ ತೆರೆಯುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಕೇಸ್ ದಾಖಲಿಸಲಾಗಿದೆ.
ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಹೆಂಡ ಮಾರಾಟ: ಒಬ್ಬನ ಬಂಧನ
ರಾಯಚೂರು: ತಾಲೂಕಿನ ಆತ್ಕೂರು ಗ್ರಾಮದಲ್ಲಿ ಅಕ್ರಮವಾಗಿ ಹೆಂಡ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಆಂಜನೇಯ್ಯ ಎಂದು ಗುರುತಿಸಲಾಗಿದೆ. ಈತ ತನ್ನ ಮನೆಯ ಮುಂದೆ ಹೆಂಡ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ 40 ಲೀಟರ್ ಹೆಂಡ ಜಪ್ತಿ ಮಾಡಿದ್ದಾರೆ. ಈ ಕುರಿತು ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
---