ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಭ್ರಷ್ಟಾಚಾರ ಬಿಜೆಪಿ: ಪಾಟೀಲ್ ಆರೋಪ

Lingaraj Badiger
Updated On : 6 Apr 2013, 11:24 am

ದೇವದುರ್ಗ: ಬಿಜೆಪಿ ಸರ್ಕಾರದಲ್ಲಿ ಕಳೆದ ನಾಲ್ಕೂವರೆ ವರ್ಷದಲ್ಲಿ ಎಂದೂ ಕಾಣದಂಥ ಭ್ರಷ್ಟಾಚಾರ, ಸ್ವಜನ ಪಕ್ಷಪಾತವನ್ನು ಮತದಾರರು ಕಂಡಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬಸವರಾಜ ಪಾಟೀಲ್ ಟೀಕಿಸಿದರು.
ತಾಲೂಕಿನ ಕರಿಗುಡ್ಡ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಸರ್ಕಾರದ ಅವಧಿಯಲ್ಲಿ ಉತ್ತಮ ಆಡಳಿತ ನೀಡಲಾಗಿದೆ. ಅನೇಕ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಬಿಜೆಪಿ ಶಾಸಕರು ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಂತರ ರು. ಲೂಟಿ ಮಾಡಿದ್ದು ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ತಮ್ಮ ಕ್ಷೇತ್ರಗಳ ಅಭಿವೃದ್ಧಿ ಮರೆತು ಸ್ವಾರ್ಥ ಸಾಧನೆ ನಡೆಸಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಮಾಡಿದ ಶಾಸಕರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಪಕ್ಷದ ಪಪಂ ಪರಿಶಿಷ್ಟ ಜಾತಿ ವಿಭಾಗದ ತಾಲೂಕ ಉಪಾಧ್ಯಕ್ಷ ಕರೆಪ್ಪ ಗಂಗೆ ನೇತೃತ್ವದಲ್ಲಿ ಜೆಡಿಎಸ್ ತೊರೆದು ಅನೇಕರು ಕಾಂಗ್ರೆಸ್ ಸೇರಿದರು.
ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಬಿ.ವಿ. ನಾಯಕ, ಸಿದ್ದನಗೌಡ ಮೂಡ್ಲಗುಂಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸಯ್ಯ ಶಾಖೆ, ಭೀಮನಗೌಡ ನಾಗಡದಿನ್ನಿ, ರಾಜಾ ಚಂದ್ರಹಾಸ ನಾಯಕ, ಹನಮಗೌಡ, ರಂಗಯ್ಯ ಅಡ್ಡಡಗಿ, ಅಲಿಸಾಬ್, ಲಕ್ಷ್ಮಣ, ಶೇಖ್ ಮುನ್ನಾಬಾಯಿ, ಗ್ರಾಪಂ ಮಾಜಿ ಅಧ್ಯಕ್ಷ ಸುಲ್ತಾನಬಾಬಾ ಕೊಪ್ಪರ, ಶಂಕ್ರಪ್ಪ ಬಂಡೆಗುಡ್ಡ, ಲಕ್ಷ್ಮಣ ಜೆಸಿಬಿ ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement