ಸಿವಿಲ್ ನ್ಯಾಯಾಧೀಶರ ವಸತಿ ಗೃಹ ಉದ್ಘಾಟನೆ ಇಂದು
ಸಿಂಧನೂರು: ಲೋಕೋಪಯೋಗಿ ಇಲಾಖೆ ಮತ್ತು ನ್ಯಾಯಾಂಗ ಇಲಾಖೆ ಹಾಗೂ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಸಿಂಧನೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನೂತನ ವಸತಿಗೃಹ ಉದ್ಘಾಟನಾ ಕಾರ್ಯಕ್ರಮ ಏ.6 ರಂದು ಬೆ. 10.40ಕ್ಕೆ ನ್ಯಾಯಾಲಯ ಸಂಕೀರ್ಣದಲ್ಲಿ ಜರುಗಲಿದೆ. ಉದ್ಘಾಟಕರಾಗಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಬಿ. ಶ್ರೀನಿವಾಸಗೌಡರು ನೂತನ ವಸತಿಗೃಹವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎಚ್. ಮಿಟ್ಟಲ್ಕೋಡ್ ವಹಿಸುವರು. ಅತಿಥಿಗಳಾಗಿ ಲಿಂಗಸ್ಗೂರು ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ವೈ. ಶಶಿಧರ, ವಕೀಲರ ಸಂಘದ ಅಧ್ಯಕ್ಷ ಕೆ.ಭೀಮನಗೌಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಿ.ನಾಗರಾಜ, ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ಖಾಜಿ ಮಲಿಕ್ ಪಾಲ್ಗೊಳ್ಳಲಿದ್ದಾರೆ.