ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ರಾಜ್ಯದ ಹಿತಕ್ಕೆ ಪ್ರಬಲ ಪ್ರಾದೇಶಿಕ ಪಕ್ಷ ಅವಶ್ಯ

Vishwanath S
Updated On : 7 Apr 2013, 1:21 am

ಮಸ್ಕಿ: ರಾಜ್ಯದ ನೆಲ, ಜಲ, ಸಂಸ್ಕೃತಿಯ ರಕ್ಷಣೆಗಾಗಿ ಪ್ರಬಲ ಪ್ರಾದೇಶಿಕ ಪಕ್ಷದ ಅವಶ್ಯಕತೆಯ ಹಿನ್ನಲೆಯಲ್ಲಿ ಕೆಜೆಪಿ ಪಕ್ಷವನ್ನು ಸ್ಥಾಪಿಸಲಾಗಿದೆ ಎಂದು ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದರು.
ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಮಸ್ಕಿ ವಿಧಾನಸಭಾ ಕ್ಷೇತ್ರದ ಕೆಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿಯೇ ಮೊದಲ ಬಾರಿಗೆ ವಿನೂತನವಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ಕೃಷಿ ಬಜೆಟ್ ಮಂಡಿಸಲಾಯಿತು. ರೈತರ ಸಾಲ ಮನ್ನಾ, ಸಂಧ್ಯಾ ಸುರಕ್ಷಾ ಯೋಜನೆ, ಭಾಗ್ಯಲಕ್ಷ್ಮೀ ಯೋಜನೆ, ಉಚಿತ ಸೈಕಲ್ ವಿತರಣೆ, ರೈತರಿಗೆ ರಿಯಾಯಿತಿ ದರದಲ್ಲಿ ಬೀಜ, ಗೊಬ್ಬರಗಳನ್ನು ನೀಡುವಂತಹ ಆನೇಕ ರೈತರ ಹಾಗೂ ಜನಪರ ಯೋಜನೆಗಳನ್ನು ತಾವು ಜಾರಿಗೆ ತಂದಿದ್ದಾಗಿ ತಿಳಿಸಿದರು.
ಬಿಜೆಪಿ ತಮ್ಮ ಬೆನ್ನಿಗೆ ಚೂರಿ: ತಮ್ಮ ಜನಪ್ರಿಯತೆ ಸಹಿಸದ ಬಿಜೆಪಿ ತಮ್ಮ ಬೆನ್ನಿಗೆ ಚೂರಿ ಹಾಕಿದರು ಎಂದು ಆರೋಪಿಸಿ, ಕೆಜೆಪಿ ಚುನಾವಣೆ ಪ್ರಣಾಳಿಕೆಯಲ್ಲಿ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಸಹಕಾರಿ ಬ್ಯಾಂಕ್ ಸ್ಥಾಪನೆ, ನಂಜುಂಡಪ್ಪ ವರದಿಯ ಸಮರ್ಪಕ ಅನುಷ್ಠಾನ ಸೇರಿದಂತೆ ವಿವಿಧ ಅಂಶಗಳು ಇರಲಿವೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement