ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಂಪಿ ಕೆರೆ ಭರ್ತಿಗೆ ಅಧಿಕಾರಿಗಳ ನಿರ್ಲಕ್ಷ್ಯ: ದಸಂಸ ಆರೋಪ

Lingaraj Badiger
Updated On : 8 Apr 2013, 11:23 am

ರಾಯಚೂರು: ಮಾನವಿ ತಾಲೂಕಿನ ಕುರ್ಡಿ ಗ್ರಾಮದ ವ್ಯಾಪ್ತಿಯಲ್ಲಿನ ಎಂಪಿ ಕೆರೆಯಲ್ಲಿ ನೀರು ಭರ್ತಿ ಮಾಡುವಲ್ಲಿ ಗ್ರಾಪಂ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳು ನಿರ್ಲಕ್ಷ್ಯ ತೋರಿದ್ದಾರೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿರುವ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಲಕ್ಷ್ಮಣ ಕುರ್ಡಿ ಮತ್ತಿತರರು, ಕುರ್ಡಿ ಗ್ರಾಮದ ಬಳಿ 2005-06ರಲ್ಲಿ ಆಗಿನ ಸಂಸದ ವೆಂಕಟೇಶ್ ನಾಯಕ ಅವರು 20 ಲಕ್ಷ ವೆಚ್ಚದಲ್ಲಿ ಕೆರೆ ನಿರ್ಮಿಸಿದ್ದು, ಕೆರೆಯ ನಿರ್ವಹಣೆಯ ಕೊರತೆಯಿಂದ ಹೂಳು ತುಂಬಿದೆ ಎಂದು ಆರೋಪಿಸಿದ್ದಾರೆ.
ಗ್ರಾಪಂ ಅಧಿಕಾರಿಗಳು ಈ ಕೆರೆಯನ್ನು ಪ್ರಸಕ್ತ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಬಳಸಬಹುದಾಗಿತ್ತು. ಆದರೆ ಕೆರೆಯ ನಿರ್ವಹಣೆ ಸೂಕ್ತ ರೀತಿಯಲ್ಲಿ ಕೈಗೊಳ್ಳದ್ದರಿಂದ ಗ್ರಾಮಸ್ಥರಿಗೆ ಈ ಕೆರೆಯಲ್ಲಿ ನೀರಿನ ಸಂಗ್ರಹ ಮತ್ತು ದೊರೆಯುವಿಕೆ ಅಸಾಧ್ಯ ಎಂಬಂಥ ಸ್ಥಿತಿಯಿದೆ ಎಂದು ಆರೋಪಿಸಿದ್ದಾರೆ.
ಕಾರಣ ಕೂಡಲೇ ಗ್ರಾಪಂ ವತಿಯಿಂದ ಕೆರೆ ನಿರ್ವಹಣೆ ಸಾಧ್ಯವಾಗದಿದ್ದಲ್ಲಿ ಕೆರೆಯ ಜಾಗವನ್ನು ಬಡವರಿಗೆ ಹಂಚಿಕೆ ಮಾಡುವಂತೆ ಒತ್ತಾಯಿಸಿರುವ ಸಮಿತಿಯು ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ತೋರಿದ ಗ್ರಾಪಂ ಪಿಡಿಒ ಮತ್ತು ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement