ಮಸ್ಕಿ: ಜೆಡಿಎಸ್ ಗೆಲವಿನ ವಿಶ್ವಾಸ
ಮಸ್ಕಿ: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮೇಲೆ ವಿಶ್ವಾಸವಿರಿಸಿ ಮಸ್ಕಿ ಕ್ಷೇತ್ರದಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ತಮ್ಮ ಗೆಲವು ಖಚಿತ ಎಂದು ಜೆಡಿಎಸ್ ಅಭ್ಯರ್ಥಿ ಅಮರೇಶ ನಾಯಕ ಬಲ್ಲಟಗಿ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಈ ಹಿಂದೆ ರಾಜ್ಯದ ಸಿಎಂ ಆಗಿದ್ದಾಗ ಕುಮಾರಸ್ವಾಮಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳು, ರೈತಪರ ಕಾಳಜಿಯ ಬಗ್ಗೆಯೇ ಮತದಾರರಿಗೆ ತಿಳಿಸಿ ಮತ ಯಾಚಿಸುವುದಾಗಿ ಅವರು ತಿಳಿಸಿದ್ದಾರೆ.
ಮಸ್ಕಿ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಜೆಡಿಎಸ್ ಪರವಾದ ಅಲೆಯಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಭ್ರಷ್ಟಾಚಾರದಿಂದ ಜನತೆ ರೋಸಿ ಹೋಗಿದ್ದಾರೆ. ಹೀಗಾಗಿ ಮಸ್ಕಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲವು ಖಚಿತ ಎಂದು ಹೇಳಿದ್ದಾರೆ.