ಇಂದು ಸಂವಾದ ಕಾರ್ಯಕ್ರಮ
ರಾಯಚೂರು: ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಶೇ.100ರಷ್ಟು ಮತದಾನ ಗುರಿ ಸಾಧನೆ ನಿಟ್ಟಿನಲ್ಲಿ ಬೃಹತ್ ಜಾಗೃತಿ ಜಾಥಾ ಮತ್ತು ಸಂವಾದ ಕಾರ್ಯಕ್ರಮವನ್ನು ನಗರದಲ್ಲಿ ಏ.10ರಂದು ಆಯೋಜಿಸಲಾಗಿದೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಾಗೃತಿ ಜಾಥಾ ಬೆಳಗ್ಗೆ 9.30ಕ್ಕೆ ಆರಂಭಗೊಳ್ಳಲಿದ್ದು, ಐಎಂಎ ಹಾಲ್ ನಲ್ಲಿ ಸಂವಾದ ಕಾರ್ಯಕ್ರಮ ಆಯೋಜಿಸಿದ್ದಾರೆ. ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಸಂವಾದ ಉದ್ಘಾಟಿಸುವರು. ಜಿಪಂ ಸಿಇಒ ಜ್ಞಾನಪ್ರಕಾಶ್, ಸಹಾಯಕ ಆಯುಕ್ತೆ ಮಂಜುಶ್ರೀ, ತಹಸೀಲ್ದಾರ್ ಎಂ.ವೈ. ಶಾನೂರು ಪಾಲ್ಗೊಳ್ಳಲಿದ್ದಾರೆಂದು ಯುನಿಸೆಫ್ ಮಕ್ಕಳ ಸಂರಕ್ಷಣೆ ಯೋಜನೆ ವಿಭಾಗದ ಪ್ರಕಟಣೆ ತಿಳಿಸಿದೆ.