ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನೀತಿ ಸಂಹಿತೆ ಉಲ್ಲಂಘನೆ: ಕೆಜೆಪಿ ವಿರುದ್ಧ ಪ್ರಕರಣ ದಾಖಲು

Rashmi Kasaragodu
Updated On : 10 Apr 2013, 11:23 am

ರಾಯಚೂರು: ಮಾನವಿ ಪಟ್ಟಣದಲ್ಲಿ ಈಚೆಗೆ ಕೆಜೆಪಿ ವತಿಯಿಂದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. ಯಡಿಯೂರಪ್ಪ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಹೆಚ್ಚಿನ ವಾಹನಗಳನ್ನು ಬಳಸಿ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ. ಕೆಜೆಪಿ ತಾಲೂಕು ಅಧ್ಯಕ್ಷರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ತಾಲೂಕು ಆಡಳಿತದಿಂದ ಸಮಾವೇಶಕ್ಕಾಗಿ ಕೇವಲ 2 ವಾಹನಗಳಿಗೆ ಪರವಾನಗಿ ಪಡೆದಿದ್ದು, 60 ವಾಹನಗಳಲ್ಲಿ ಕಾರ್ಯಕರ್ತರನ್ನು ಕರೆ ತಂದಿದ್ದು ಪತ್ತೆಯಾದ ಹಿನ್ನೆಲೆ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ನಿಟ್ಟಿನಲ್ಲಿ ಕೆಜೆಪಿ ತಾಲೂಕು ಅಧ್ಯಕ್ಷ ವೀರಪ್ಪಗೌಡ ಚೀಕಲಪರ್ವಿ ಅವರ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯ ಕೇಸ್ ದಾಖಲಿಸಲಾಗಿದೆ. ಈ ಕುರಿತು ಮಾನವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಅಕ್ರಮ ಮದ್ಯ ಜಪ್ತಿ
ರಾಯಚೂರು: ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದ ಬಳಿಯ ಹಳ್ಳದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ಪೊಲೀಸರು ಜಪ್ತಿ ಮಾಡಿ ಒಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ನಲ್ಲರಾಜು ಎಂದು ಗುರುತಿಸಲಾಗಿದೆ. ಈತ ಚುನಾವಣೆಯಲ್ಲಿ ಹಂಚುವ ಸಲುವಾಗಿ ಸಾಲಗುಂದಾ ಗ್ರಾಮದ ಸೀಮೆಯಲ್ಲಿ ಹಳ್ಳದ ದಂಡೆಯಲ್ಲಿ ಸಂಗ್ರಹಿಸಿಟ್ಟಿದ್ದ ವಿವಿಧ ಕಂಪನಿಗಳ ರು. 1.17ಲಕ್ಷ ಬೆಲೆಯ ಮದ್ಯ ಜಪ್ತಿ ಮಾಡಲಾಗಿದೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement