ಪಕ್ಷಗಳ ಅಭ್ಯರ್ಥಿಗಳ ಸಭೆ: ಅಧಿಕಾರಿಗಳ ಮಾರ್ಗದರ್ಶನ
ರಾಯಚೂರು: ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಮಂಗಳವಾರ ಸಹಾಯಕ ಆಯುಕ್ತೆ ಮಂಜುಶ್ರೀ ಅವರ ಅಧ್ಯಕ್ಷತೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನಾಮಪತ್ರ ಭರ್ತಿ ಮಾಡುವ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡುವ ಸಭೆ ಕರೆಯಲಾಗಿತ್ತು.
ಸಹಾಯಕ ಆಯುಕ್ತೆ ಮಂಜುಶ್ರೀ ಸಭೆಯಲ್ಲಿ ಮಾತನಾಡಿ, ವಿವಿಧ ಪಕ್ಷಗಳವರು ಒಂದೇ ಬಾರಿಗೆ ನಾಮಪತ್ರಗಳನ್ನು ಸಲ್ಲಿಸಲು ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಅನಾನೂಕೂಲವಾಗುವುದು. ಆದ್ದರಿಂದ ಬೇರೆ ಬೇರೆ ಸಮಯದಲ್ಲಿ ನಾಮಪತ್ರಗಳನ್ನು ಸಲ್ಲಿಸುವುದು ಒಳ್ಳೆಯದು ಎಂದು ಸಲಹೆ ನೀಡಿದರು.
ನಾಮಪತ್ರ ಸಲ್ಲಿಕೆಯ ಬಗ್ಗೆ ಮೊದಲೇ ಸಂಬಂಧಿಸಿದ ಅಧಿಕಾರಿಗೆ ಮಾಹಿತಿ ನೀಡುವುದು ಅವಶ್ಯ. ರಜೆ ದಿನಗಳಾದ ಏ.11 ಮತ್ತು 14ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುವುದಿಲ್ಲ. ಆದರೆ 2ನೇ ಶನಿವಾರದ ದಿನವಾದ ಏ.13ರಂದು ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಿದರು.