ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಬಿಎಸ್‌ವೈ ಜನಪರ ಯೋಜನೆಗಳೇ ಗೆಲವಿಗೆ ಶ್ರೀರಕ್ಷೆ: ಮುರಾರಿ

Lingaraj Badiger
Updated On : 13 Apr 2013, 10:53 am

ಕನ್ನಡಪ್ರಭ ವಾರ್ತೆ, ಮುದಗಲ್, ಏ.12
ಮಾಜಿ ಮುಖ್ಯಮಂತ್ರಿ, ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರ ಜನಪರ ಯೋಜನೆಗಳು ತನ್ನ ಗೆಲವಿಗೆ ಶ್ರೀರಕ್ಷೆಯಾಗಲಿದೆ ಎಂದು ಲಿಂಗಸ್ಗೂರು ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಎಚ್.ಬಿ. ಮುರಾರಿ ಹೇಳಿದರು.
ಪಟ್ಟಣದಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ಸುವರ್ಣ ಭೂಮಿ, ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, ಭಾಗ್ಯಲಕ್ಷ್ಮೀ, ರೈತರಿಗೆ ಸಾಲ ಮನ್ನಾ, ಶೇ. 1ರು. ಬಡ್ಡಿದರದಲ್ಲಿ ಸಾಲ ವಿತರಣೆ ಯಂತಹ ಅನೇಕ ಯೋಜನೆಗಳು ಜನರಿಗೆ ಮನವರಿಕೆಯಾಗಿದೆ. ಅಲ್ಲದೆ ತಾವು ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ ತಾಲೂಕಿನ ಜನರಿಗೆ ಚಿರಪರಿಚಿತ. ಯಾವುದೇ ಹಳ್ಳಿಗೆ ಭೇಟಿ ನೀಡಿದರೂ, ಜನ ಪ್ರೀತಿಯಿಂದ ಕಾಣುತ್ತಿದ್ದಾರೆ.
ಮಾಜಿ ಶಾಸಕ ಮಾನಪ್ಪ ವಜ್ಜಲ್ ದುರಾಡಳಿತಕ್ಕೆ ತಾಲೂಕಿನ ಜನತೆ ಬೇಸರಗೊಂಡಿದ್ದಾರೆ. ಜನ ಈ ಬಾರಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುತ್ತಾರೆ ಎಂದರು.
ಪ್ರಚಾರ ಕಾರ್ಯದಲ್ಲಿ ಕೆಜೆಪಿ ಜಿಲ್ಲಾ ಕಾರ್ಯದರ್ಶಿ ಶರಣಯ್ಯ ಗೋರೆಬಾಳ, ತಾ.ಪಂ. ಮಾಜಿ ಉಪಾಧ್ಯಕ್ಷ ದೊಡ್ಡಬಸಪ್ಪ, ಬಾಬು ಹಟ್ಟಿ, ಶಶಿಧರಗೌಡ ಬನ್ನಿಗೋಳ, ಡಾ. ಶರಣಬಸವ ಬನ್ನಿಗೋಳ, ಯಕಬಾಲ ಹವಾಲ್ದಾರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement