ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮಾಜಿ ಶಾಸಕ ಪಾಪಾರೆಡ್ಡಿ 'ಕೈ' ಸೇರ್ಪಡೆ

Lingaraj Badiger
Updated On : 13 Apr 2013, 10:53 am

ರಾಯಚೂರು: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಬಿಜೆಪಿಯ ಮುಖಂಡ ಹಾಗೂ ಮಾಜಿ ಶಾಸಕ ಪಾಪಾರೆಡ್ಡಿ ಅವರು ಕಾಂಗ್ರೆಸ್ ಪಕ್ಷವನ್ನು ವಿಧ್ಯುಕ್ತವಾಗಿ ಸೇರಿದರು. ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್, ಮಾಜಿ ಸಂಸದ ಹಾಗೂ ದೇವದುರ್ಗದ ಅಭ್ಯರ್ಥಿ ವೆಂಕಟೇಶ್ ನಾಯಕ, ನಗರ ಕ್ಷೇತ್ರದ ಅಭ್ಯರ್ಥಿ ಸೈಯದ್ ಯಾಸೀನ್ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರಿದರು. ಅವರೊಂದಿಗೆ ಆರ್‌ಡಿಎ ಮಾಜಿ ಅಧ್ಯಕ್ಷ ಜಗನ್ನಾಥ ಕುಲಕರ್ಣಿ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಹರವಿ ನಾಗನಗೌಡ, ಎಪಿಎಂಸಿ ಉಪಾಧ್ಯಕ್ಷ ಬಾಬುರಾವ್ ಸೇರಿದಂತೆ ಅನೇಕರು ಕಾಂಗ್ರೆಸ್‌ಗೆ ಸೇರಿದರು.
ಇದಕ್ಕೂ ಮೊದಲು ನಗರದ ರಂಗಮಂದಿರದಿಂದ ಪಾಪಾರೆಡ್ಡಿ ಅವರ ಬೆಂಬಲಿಗರು ಬೈಕ್ ರ್ಯಾಲಿ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೈಕ್‌ನಲ್ಲಿ ಆಗಮಿಸಿದ ಅವರು ಪಾಪಾರೆಡ್ಡಿ ಪರ ಘೋಷಣೆ ಕೂಗಿದರು. ನೂರಾರು ಬೆಂಬಲಿಗರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement